LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಕ್ಫ್ ವಿವಾದ - ರಾತ್ರೋರಾತ್ರಿ ಪ್ರತಿಭಟನೆಗೆ ಧುಮುಕಿದ ರೈತರು

ವಿಜಯಪುರ : ವಕ್ಫ್ ಇದೀಗ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ವಕ್ಫ್ ವಿರೋಧಿಸಿ ರೈತರು ಹೋರಾಟಕ್ಕಿಳಿದಿದ್ಧಾರೆ. ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈತರು ಅಹೋರಾತ್ರಿ ಹೋರಾಟ ನಡೆಸಿದ್ದು, ಇನ್ನೆ ತಡರಾತ್ರಿಯಿಂದ ಇಂದು ಕೂಡ ಮುಂದುವರೆದಿದೆ. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ರೈತ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ ಅಹ್ಮದ್ ಬ್ಯಾನರ್‌ಗಳನ್ನು ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲಿಯೇ ಅಡುಗೆ, ಊಟ ಮಾಡಿ ಅಲ್ಲಿಯೇ ಮಲಗಿ ಅಹೋರಾತ್ರಿ ಅನಿರ್ದಿಷ್ಟ ಹೋರಾಟ ಆರಂಭಿಸಿದ್ದಾರೆ. ಎಲ್ಲಿಯವರೆಗೂ ರೈತರ ಪಹಣಿಯಲ್ಲಿರುವ ವಕ್ಫ್ ಬೋರ್ಡ್ ಹೆಸರು ತೆಗೆದು ಹಾಕುವುದಿಲ್ಲವೋ ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹೋರಾಟಕ್ಕೆ ಸರ್ಕಾರ ಜಗ್ಗದಿದ್ದರೆ ಶವಸಂಸ್ಕಾರ, ತಿಥಿ ಕಾರ್ಯಕ್ರಮ, ಕತ್ತೆ ಚಳವಳಿ ಸೇರಿದಂತೆ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ಇದು ಅನ್ನದಾತರ ಹೋರಾಟ. ಇದಕ್ಕೆ ಯಾರೇ ಬೆಂಬಲ ನೀಡಿದರು ನಾವು ಸ್ವಾಗತ ಮಾಡುತ್ತೇವೆ ಎಂದು ರೈತರು ಹೇಳಿದ್ದಾರೆ.

ಹೋರಾಟ ಕೈಬಿಡಲು ರಾತ್ರೋರಾತ್ರಿ ಎಡಿಸಿ ಸೋಮಲಿಂಗ ಗೆಣ್ಣೂರ ಬಂದು ರೈತರಿಗೆ ಇಂಡಿ ಎಸಿ ಆದೇಶದ ಕಾಪಿ ತೋರಿಸಿ ಹೋರಾಟ ಕೈ ಬಿಡಲು ಮನವಿ ಮಾಡಿದರು. ಆದರೆ ರೈತರು ಇದ್ಯಾವುದಕ್ಕೂ ಒಪ್ಪಲಿಲ್ಲ. ಇದೇ ವೇಳೆ ಪೊಲೀಸ್ ಹಾಗೂ ರೈತರ ಮಧ್ಯೆ ಮಾತಿನ ಚಕಮಕಿ ಏರ್ಪಟ್ಟು, ರೈತರು ಇಂದು ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಉಚ್ಚಾಟನೆನಕಲ್‌ ಕರ್ನೆ ಲಿಯೆ ಅಕಲ್‌ ಚಾಹಿಯೆ : ವಿದೇಶಿ ನೆಲದಲ್ಲಿ ಪಾಕಿಸ್ತಾನವನ್ನು ಲೇವಡಿ ಮಾಡಿದ ಓವೈಸಿಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿತ್ತಂತೆ 2 ಸಾವಿರ ಅಶ್ಲೀಲ ಫೋಟೊ, 50 ವಿಡಿಯೋಬಾಂಬ್ ಇಡಲು ಯತ್ನಿಸುತ್ತಿರುವಾಗ ಸ್ಫೋಟ - ವ್ಯಕ್ತಿ ಸಾವುಕಾರಿನಲ್ಲಿ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣುಜವಾಹರಲಾಲ್ ನೆಹರು ಪುಣ್ಯತಿಥಿ - ಪ್ರಧಾನಿ ಮೋದಿಯಿಂದ ಗೌರವ ನಮನಸರಕಾರ ಹೈ ಅಲರ್ಟ್‌, ಆಸ್ಪತ್ರೆಗಳಲ್ಲಿ ಕೋವಿಡ್‌ ಬೆಡ್‌ ಹೆಚ್ಚಳ, ಆರೋಗ್ಯ ಸಿಬ್ಬಂದಿ ರಜೆ ರದ್ದುಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ..!'ಸದ್ಯ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ನೀಡುವುದಿಲ್ಲ'- ಮಧು ಬಂಗಾರಪ್ಪ