LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವು

ಬೆಂಗಳೂರು: ರಾಜ್ಯದಲ್ಲಿ ವಖ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾ ಲಯದಲ್ಲಿ ಜಿಲ್ಲಾ ವಖ್ಫ್ ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲಾವಾರು ವಖ್ಫ್ ಆಸ್ತಿಗಳ ಸರ್ಕಾರಿ ಒತ್ತುವರಿ, ಖಾಸಗಿ ಒತ್ತುವರಿ, ನ್ಯಾಯಾಲಯದಲ್ಲಿರುವ ಪ್ರಕರಣ ಸೇರಿ ಸಮಗ್ರ ಮಾಹಿತಿ ಜಿಲ್ಲಾ ಅಧಿಕಾರಿಗಳು ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ವಖ್ಫ್ ಆಸ್ತಿಗಳ ಒತ್ತುವರಿ ಬಗ್ಗೆ ಖಾಸಗಿ ಸಂಸ್ಥೆ ಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುತ್ತಿದೆ. ಅಧಿಕಾರಿಗಳು ನೀಡುವ ವರದಿ, ಖಾಸಗಿ ಸಂಸ್ಥೆ ಯ ಮಾಹಿತಿ ತಾಳೆ ಆಗಬೇಕು. ಒಂದೊಮ್ಮೆ ತಾಳೆ ಆಗದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಗಳಲ್ಲಿ ಕೆಲವು ಅಧಿಕಾರಿಗಳು ನ್ಯಾಯಾಲಯ ದಲ್ಲಿರುವ ಪ್ರಕರಣ ಗಳ ಬಗ್ಗೆ ಅಧ್ಯಯನ ನಡೆಸದೆ ನ್ಯಾಯಾಲಯ ಕ್ಕೆ ಹಾಜಾರಾಗದೆ ಪರೋಕ್ಷವಾಗಿ ಒತ್ತುವರಿ ದಾರರ ಜತೆ ಶಾಮೀಲಾಗಿರುವ ಮಾಹಿತಿ ಇದೆ, ವರ್ತನೆ ಸರಿ ಪಡಿಸಿಕೊಳ್ಳ ದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹಣ ಮಾಡಲು ವಖ್ಫ್ ಇಲಾಖೆಗೆ ಬರಬೇಡಿ.ಇದು ದೇವರ ಕೆಲಸ ಆರೋಪ ಕೇಳಿ ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವಖ್ಫ್ ಅಸ್ತಿಗಳ ರಕ್ಷಣೆ ಗೆ ಕಾಂಪೌಂಡ್ ಗೋಡೆ ನಿರ್ಮಿಸಲು ಅಗತ್ಯ ಇರುವ ಕಡೆ ಪ್ರಸ್ತಾವನೆ ಸಲ್ಲಿಸಿ. ವಖ್ಫ್ ಆಸ್ತಿ ಎಂದು ಗುರುತಿಸುವಂತಾಗಲು ಏಕ ರೂಪದ ಕಾಪೌಂಡ್ ಹಾಕಬೇಕು. ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಉಪಸ್ಥಿತರಿದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಬಿಎಂಪಿ ಅಧಿಕಾರಿಗಳಿಂದ ಮಹಾ ಎಡವಟ್ಟು - ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಿಎಂ ಬದಲು BSY ಫೋಟೋ ಬಳಕೆರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮಾಮೋದಿ 3.02 ಕೋಟಿ ರೂ. ಮೌಲ್ಯದ ಆಸ್ತಿ ಘೋಷಣೆBreaking News: ಪ್ರಜ್ವಲ್ ರೇವಣ್ಣ ಬುಕ್ ಮಾಡಿದ್ದ ಫ್ಲೈಟ್ ಟಿಕೆಟ್ ಕ್ಯಾನ್ಸಲ್..!ಲೋಕಸಭಾ ಚುನಾವಣೆ ಬಳಿಕ ಮೊಬೈಲ್ ರೀಚಾರ್ಜ್ ಬೆಲೆ ಶೇ.25 ದುಬಾರಿಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: 18 ಕಡೆ ಎಸ್‌ಐಟಿ ರೇಡ್ - ಪ್ರೀತಂ ಗೌಡ ಆಪ್ತನ ಮನೆಯಲ್ಲಿ ಸಿಕ್ಕಿದ್ದಾದರೂ ಏನು?PDO ಹುದ್ದೆಗಳ ಭರ್ತಿಗೆ ಇಂದೇ ಕೊನೆಯ ದಿನ, ಆಸಕ್ತರು ಅರ್ಜಿ ಸಲ್ಲಿಸಿDHFL ಹಗರಣ: 34,000 ಕೋಟಿ ರೂ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಸಿಬಿಐನಿಂದ ಧೀರಜ್ ವಾಧವನ್‌ ಅರೆಸ್ಟ್ಮನೆಯ ಯಜಮಾನಿ ಮೃತಪಟ್ಟರೆ ಗೃಹಲಕ್ಷ್ಮಿ ಹಣ ಯಾರ ಖಾತೆಗೆ ಹೋಗುತ್ತೆ ಗೊತ್ತೇ?SSLC: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಬಂಪರ್ ಬಹುಮಾನ ನೀಡಿದ ಸಿದ್ದರಾಮಯ್ಯ