Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
India

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್ ಆಗಿದ್ಯಾ?!: ಬಿಟ್ಟುಹೋದ ಮತದಾರರಿಗೆ 'ಸ್ಪೆಷಲ್ ಡ್ರೈವ್'ಗೆ ಇಸಿಐ ಆದೇಶ!

ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ, ಆಕಸ್ಮಿಕವಾಗಿ ಪಟ್ಟಿಯಿಂದ ಕೈಬಿಟ್ಟುಹೋದ ಮತದಾರರನ್ನು ಗುರುತಿಸಿ ಅವರನ್ನು ಮತ್ತೆ ಪಟ್ಟಿಗೆ ಸೇರ್ಪಡೆಗೊಳಿಸಲು ವಿಶೇಷ ಅಭಿಯಾನವನ್ನು ನಡೆಸುವಂತೆ ಭಾರತೀಯ ಚುನಾವಣಾ ಆಯೋಗವು (ECI) ನಿರ್ದೇಶನ ನೀಡಿದೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರ(CEO) ಕಳುಹಿಸಿರುವ ಅಧಿಕೃತ ಸಂದೇಶದಲ್ಲಿ, ಈ ವಿಶೇಷ ಅಭಿಯಾನವು ಮುಖ್ಯವಾಗಿ ಕಣ್ತ ತಪ್ಪಿಸಿ ಪಟ್ಟಿಯಿಂದ ಹೊರಗುಳಿದ ಮತದಾರರ ಜೊತೆಗೆ ಪ್ರಥಮ ಬಾರಿಗೆ ಮತದಾರರಾಗುವ ಯುವ ಮತದಾರರ ಮೇಲೆ ವಿಶೇಷ ಗಮನಹರಿಸಲಿದೆ ಎಂದು ಆಯೋಗ ತಿಳಿಸಿದೆ. ಸೆಪ್ಟೆಂಬರ್ 29 ರಂದು ಹೊರಡಿಸಲಾದ ಪತ್ರ ಹಾಗೂ ಅಕ್ಟೋಬರ್ 1 ರಂದು ಎಲ್ಲಾ ಸಿಇಒಗಳೊಂದಿಗೆ ನಡೆಸಿದ ಸಭೆಯ ಮುಂದುವರಿದ ಭಾಗವಾಗಿ ಈ ನಿರ್ದೇಶನವನ್ನು ನೀಡಲಾಗಿದೆ.

SIR ಪ್ರಕ್ರಿಯೆಯ ಗಣತಿ ಹಂತದಲ್ಲಿ ಪ್ರತಿಯೊಬ್ಬ ಬೂತ್ ಮಟ್ಟದ ಅಧಿಕಾರಿಯೂ (BLO) ವಿಳಾಸ ಬದಲಾಯಿಸಿದ, ಮೃತಪಟ್ಟ, ಗೈರುಹಾಜರಾದ ಅಥವಾ ನಕಲಿ (ASDD) ಮತದಾರರ ಪಟ್ಟಿಯನ್ನು ಸಿದ್ಧಪಡಿಸಿದ್ದರು. ಈ ಪಟ್ಟಿಯನ್ನು ಪಂಚಾಯತ್ ಭವನಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಕಚೇರಿಯ ಸೂಚನಾ ಫಲಕಗಳಲ್ಲಿ ಪ್ರದರ್ಶಿಸುವುದರ ಜೊತೆಗೆ ಬೂತ್ ಮಟ್ಟದ ಏಜೆಂಟರು (BLA), ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗಿತ್ತು ಮತ್ತು ಸಿಇಒ ವೆಬ್‌ಸೈಟ್‌ಗಳಿಗೂ ಅಪ್‌ಲೋಡ್ ಮಾಡಲಾಗಿತ್ತು. ನಂತರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ, ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿಯ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು.

ಮ ಮತದಾರರ ನೋಂದಣಿಯು ನಿರಂತರ ಪ್ರಕ್ರಿಯೆಯಾಗಿದ್ದು, ಇದುವರೆಗೆ ಹೆಸರು ನೋಂದಾಯಿಸಿಕೊಳ್ಳದವರು ಅಥವಾ ಪಟ್ಟಿಯಿಂದ ಹೆಸರು ಕಳೆದುಕೊಂಡವರು ಯಾವುದೇ ಸಮಯದಲ್ಲಿ ನೋಂದಣಿಗೆ ಅರ್ಜಿ ಸಲ್ಲಿಸಬಹುದು ಎಂದು ಆಯೋಗ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಅಂತಹ ಅರ್ಹ ಮತದಾರರನ್ನು ಗುರುತಿಸಿ ಅವರಿಗೆ ನೆರವು ನೀಡುವುದು ಈ ವಿಶೇಷ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಬೂತ್ ಮಟ್ಟದ ಅಧಿಕಾರಿಗಳು (BLO) ಪ್ರಸ್ತುತ ಮತದಾರರ ಪಟ್ಟಿಯನ್ನು ಹಿಂದಿನ ಪಟ್ಟಿಯೊಂದಿಗೆ ಹೋಲಿಕೆ ಮಾಡಿ, ನಾಪತ್ತೆಯಾದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಿದ್ದಾರೆ.

ಪ್ರತಿ ವಾರ ಕನಿಷ್ಠ 20 ರಿಂದ 25 ಮತದಾರರನ್ನು ಭೇಟಿ ಮಾಡಿ ಈ ಪ್ರಕ್ರಿಯೆಯನ್ನು ಸುಮಾರು ಒಂದು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಬಿಎಲ್‌ಒಗಳಿಗೆ ಸೂಚಿಸಲಾಗಿದೆ. ಮನೆ ಮನೆ ಭೇಟಿಯ ಸಂದರ್ಭದಲ್ಲಿ ಬಿಎಲ್‌ಒಗಳು ಅರ್ಹ ಮತದಾರರಿಗೆ ನಮೂನೆ 6 (Form 6) ಭರ್ತಿ ಮಾಡಲು ಸಹಾಯ ಮಾಡಲಿದ್ದಾರೆ. ಸಂಗ್ರಹಿಸಿದ ಅರ್ಜಿಗಳು ಹಾಗೂ ಪರಿಶೀಲನಾ ವರದಿಗಳನ್ನು ಚುನಾವಣಾ ನೋಂದಣಾಧಿಕಾರಿಗಳಿಗೆ (ERO) ಸಲ್ಲಿಸಲಾಗುವುದು. ಪ್ರಜಾಪ್ರತಿನಿಧಿ ಕಾಯ್ದೆ, 1950 ರ ಅಡಿಯಲ್ಲಿ ಇವುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಅರ್ಹ ಯುವ ಮತದಾರರು ಹಾಗೂ ಸ್ಥಳೀಯ ನಿರಾಶ್ರಿತರು ಮತ್ತು ಕೂಲಿ ಕಾರ್ಮಿಕರಿಗಾಗಿ ವಿಶೇಷ ಬೂತ್ ಮಟ್ಟದ ಶಿಬಿರಗಳನ್ನು ಆಯೋಜಿಸಲು ಆಯೋಗ ನಿರ್ದೇಶಿಸಿದೆ. ಈ ಅಭಿಯಾನದ ಪ್ರಗತಿಯನ್ನು ಸಿಇಒ, ಡಿಇಒ ಮತ್ತು ಇಆರ್‌ಒ ಮಟ್ಟದಲ್ಲಿ ನಿರಂತರವಾಗಿ ಪರಿಶೀಲಿಸಲಾಗುವುದು ಎಂದು ಆಯೋಗ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!