-
ಸರ್ಕಾರಿ ಕಾರ್ಯಕ್ರಮಗಳಿಗಷ್ಟೇ ಆದ್ಯತೆ: ಅಧಿಕೃತ ಸರ್ಕಾರಿ ಸಮಾರಂಭಗಳು, ಪ್ರಮಾಣವಚನ ಸ್ವೀಕಾರ, ರಾಷ್ಟ್ರೀಯ ಹಬ್ಬಗಳು ಅಥವಾ ಸರ್ಕಾರದ ಇಲಾಖೆಗಳು ಅಧಿಕೃತವಾಗಿ ಆಯೋಜಿಸುವ ಸಾರ್ವಜನಿಕ ಮಹತ್ವದ ಕಾರ್ಯಕ್ರಮಗಳಿಗೆ ಮಾತ್ರ ನಿಯಮಾನುಸಾರ ಅವಕಾಶ ಕಲ್ಪಿಸಲಾಗುತ್ತದೆ.
-
ಖಾಸಗಿ ಕಾರ್ಯಕ್ರಮಗಳಿಗೆ ನಿಷೇಧ: ಯಾವುದೇ ಖಾಸಗಿ ವ್ಯಕ್ತಿಗಳು, ಸಂಘಟನೆಗಳು ಅಥವಾ ಸರ್ಕಾರಿಯೇತರ ಸಂಸ್ಥೆಗಳಿಗೆ (NGOs) ವಿಧಾನಸೌಧದ ಮೆಟ್ಟಿಲುಗಳನ್ನು ಬಳಸಿ ಸಮಾರಂಭ ನಡೆಸಲು ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ.
ಕೆಲವು ಮಾಧ್ಯಮಗಳಲ್ಲಿ ಇತ್ತೀಚೆಗೆ ಪ್ರಕಟವಾದ ಊಹಾಪೋಹದ ವರದಿಗಳು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದ್ದು, ಸರ್ಕಾರ ಇಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡಿಲ್ಲ. ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.