LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಯನಾಡು: ಕೇರಳದಲ್ಲಿ ಬಹಿರಂಗವಾಗಿ ನಕ್ಸಲರ ತಂಡ ಪತ್ತೆ; ಗ್ರಾಮಸ್ಥರಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಕರೆ..!

ವಯನಾಡು: ವಯನಾಡು ಜಿಲ್ಲೆಯ ಕಂಬಮಲೆ ಅರಣ್ಯ ಹಾಗೂ ಮಕ್ಕಿಮಲೆ ಅರಣ್ಯದಲ್ಲಿ ನಕ್ಸಲರು ಇದ್ದಾರೆ ಅನ್ನೋ ಅನುಮಾನ ಬಲವಾಗಿತ್ತು. ಹೀಗಾಗಿ ಕೇರಳದ ನಕ್ಸಲ್ ನಿಗ್ರಹ ತಂಡ ನಿರಂತರ ಕೂಂಬಿಂಗ್ ನಡೆಸಿತ್ತು. ಆದ್ರೆ, ನಕ್ಸಲರ ಸುಳಿವು ಪತ್ತೆಯಾಗದ ಕಾರಣ ಕೂಂಬಿಂಗ್ ನಿಲ್ಲಿಸಲಾಗಿತ್ತು. ಆದ್ರೆ, ಇದೀಗ ಲೋಕಸಭಾ ಚುನಾವಣೆ ವೇಳೆ ಮತ್ತೆ ನಕ್ಸಲರು ಗ್ರಾಮದಲ್ಲಿ ಕಾಣಿಸಿಕೊಂಡಿದ್ದಾರೆ. ಮಾವೋವಿಸ್ಟ್ ಜಿಂದಾಬಾದ್ ಎಂಬ ಘೋಷಣೆ ಕೂಗಿ ಗ್ರಾಮಕ್ಕೆ ಎಂಟ್ರಿ ಕೊಟ್ಟು ನಾಲ್ವರ ತಂಡ ಚುನಾವಣೆಗೆ ಬಹಿಷ್ಕಾರ ಮಾಡುವಂತೆ ಕರೆ ನೀಡಿದ್ದಾರೆ. ಗ್ರಾಮಸ್ಥರ ಜೊತೆ ಮಾತನಾಡಿ ಕಳೆದ ನಲುವತ್ತು ವರ್ಷದಿಂದ ಕಂಬಮಲೆ ಅರಣ್ಯ ತಪ್ಪಲಿನ ಜನರ ಸಮಸ್ಯೆಯನ್ನು ಸರ್ಕಾರ ಗಮನಿಸಿಲ್ಲ. ಇಲ್ಲಿ ವಾಸವಾಗಿರುವ ಕೂಲಿ ಕಾರ್ಮಿಕರ ಕಷ್ಟ ಸರ್ಕಾರ ಅರ್ಥ ಮಾಡಿಕೊಂಡಿಲ್ಲ. ಹೀಗಾಗಿ ಎಲ್ಲರೂ ಚುನಾವಣೆ ಬಹಿಷ್ಕಾರ ಮಾಡಿ ಎಂದು ಕರೆ ನೀಡಿದ್ದಾರೆ. ಈ ತಂಡದಲ್ಲಿ ಕೇರಳ ರಾಜ್ಯಕ್ಕೆ ಬಹಳಷ್ಟು ವರ್ಷಗಳಿಂದ ತಲೆ ಮರೆಸಿಕೊಂಡಿರುವ ನಕ್ಸಲರು ಇದ್ದರು ಅನ್ನೋ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ. ಕಂಬಮಲೆ ಎಂಬ ಪ್ರದೇಶದಲ್ಲಿ ಟೀ ಎಸ್ಟೇಟ್ ಇದ್ದು, ಇಲ್ಲಿನ ಕೂಲಿ ಕಾರ್ಮಿಕರ ಜೊತೆ ನಕ್ಸಲರು ಮಾತುಕತೆ ನಡಿಸಿದ ವಿಡಿಯೋ ಈಗ ಪೊಲೀಸರಿಗೆ ಲಭ್ಯವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಈ ಯೋಜನೆಯಡಿ 50 ಸಾವಿರ ಸಾಲ- 25 ಸಾವಿರ ಮರುಪಾವತಿ ಮಾಡಿದರ ಸಾಕು.! 25 ಸಾವಿರ ಫ್ರೀಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ - ಆರೋಪಿಗಾಗಿ 40 ಜನರ ತಂಡ ರಚನೆಬುಧವಾರ ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯದಿನಕ್ಕೆ ಕೇವಲ 7 ರೂಪಾಯಿ ಹೂಡಿಕೆ ಮಾಡಿದರೆ ಸಾಕು, ಪ್ರತಿ ತಿಂಗಳು ಸಿಗುತ್ತದೆ ₹5000..! ಕೇಂದ್ರ ಸರ್ಕಾರದ ಯೋಜನೆ.... ಇಂದೇ ಇದರ ಸದುಪಯೋಗ ಪಡಿಸಿಕೊಳ್ಳಿಕೋಲ್ಕತ್ತಾ ವೈದ್ಯೆ ಪ್ರಕರಣ- 'ನಕಲಿ ಸುದ್ದಿ' ಕುರಿತು ಬಿಜೆಪಿ ನಾಯಕ, ಇಬ್ಬರು ವೈದ್ಯರಿಗೆ ಸಮನ್ಸ್ಬೆಂಗಳೂರಲ್ಲಿ ಝಿಕಾ ಆತಂಕ- 7 ಕೇಸ್ ಪತ್ತೆಈ ಸಂಜೆ ಸಮಯದಲ್ಲಿ ಈ ಎರಡು ಮನೆಗೆ ಬರುವುದೇ ಇಲ್ಲ.!ಇಷ್ಟಪಟ್ಟವರು ನಿಮ್ಮ ಹತ್ತಿರ ಬರಬೇಕೆಂದರೆ ಈ ಮೂರು ಶಬ್ದವನ್ನು ಪ್ರಯೋಗಿಸಿ.ತುಂಗಭದ್ರಾ ಜಲಾಶಯದ ಎಲ್ಲಾ 5 ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿರುಚಿಕರವಾದ ಮಂಗಳೂರು ಸೌತೆಕಾಯಿ ಸಾಂಬಾರ್ ಮಾಡುವ ವಿಧಾನ