Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ವಾರ್ಡ್ ನೋ 13ರಲ್ಲಿ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರ.

ಬಳ್ಳಾರಿ, ಅ.06:: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸೇವಾ ಮೇರಾ ಯೋಗದಾನ ಹಾಗೂ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ನಗರದ 13ನೇ ವಾರ್ಡ್‌ನ ಮಿಲ್ಲರ್‌ಪೇಟೆಯ ರೂಪನಗುಡಿ ನಾರಪ್ಪ ಬೀದಿಯಲ್ಲಿ ಭಾನುವಾರ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ಜನಜಾಗೃತಿ ಸಂಘ ಮತ್ತು ಆಟೋ ಚಾಲಕರ ಸಂಘದ ಜಿಲ್ಲಾಧ್ಯಕ್ಷ ಹುಂಡೇಕರ್ ರಾಜೇಶ್ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಶಿಬಿರವನ್ನು ಬಳ್ಳಾರಿ ನಗರದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಅವರು ಉದ್ಘಾಟಿಸಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಹೆಚ್ಚಿನ ಕಾಳಜಿ ವಹಿಸಬೇಕು. ಆರಂಭಿಕ ಹಂತದಲ್ಲಿಯೇ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಅನೇಕ ಗಂಭೀರ ಸಮಸ್ಯೆಗಳನ್ನು ತಡೆಗಟ್ಟಬಹುದು.
 ಸಾರ್ವಜನಿಕರಿಗೆ ಉಚಿತವಾಗಿ ತಜ್ಞ ವೈದ್ಯರ ಸೇವೆ ದೊರೆಯುವ ಇಂತಹ ಶಿಬಿರಗಳು ಜನರಿಗೆ ಉಪಯುಕ್ತವಾಗಿವೆ. ಶಿಬಿರದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ, ಶಸ್ತ್ರಚಿಕಿತ್ಸೆ, ಪ್ರಸೂತಿ ಮತ್ತು ಸ್ತ್ರೀರೋಗ, ಮಕ್ಕಳ ಆರೋಗ್ಯ, ದಂತ, ಕಣ್ಣು, ಮೂಳೆ ಮತ್ತು ಸಂಧಿ, ನೋವು ನಿರ್ವಹಣೆ ಹಾಗೂ ಸೋನಾಲಜಿ ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರು ಭಾಗವಹಿಸಿ ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿದರು.
ವೈದ್ಯಕೀಯ ತಪಾಸಣೆಯ ಬಳಿಕ ಅಗತ್ಯವಿರುವವರಿಗೆ ಸೂಕ್ತ ಸಲಹೆ ಹಾಗೂ ಚಿಕಿತ್ಸಾ ಮಾರ್ಗದರ್ಶನ ನೀಡಲಾಯಿತು.
ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ವೈದ್ಯಕೀಯ ಸಲಹೆಯೊಂದಿಗೆ ಅಗತ್ಯವಿರುವವರಿಗೆ ಉಚಿತ ಔಷಧಿಗಳನ್ನು ವಿತರಿಸಲಾಯಿತು. ವೈದ್ಯಕೀಯವಾಗಿ ಅಗತ್ಯವಿರುವ ತುರ್ತು ಶಸ್ತ್ರಚಿಕಿತ್ಸೆಗಳಿಗೆ ಅರ್ಹತೆ ಹಾಗೂ ವೈದ್ಯರ ನಿರ್ಧಾರದ ಆಧಾರದ ಮೇಲೆ ಉಚಿತ ಶಸ್ತ್ರಚಿಕಿತ್ಸಾ ನೆರವು ಒದಗಿಸುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು.
ಡಾ. ಸುಂದರ್, ಡಾ. ಅರುಣಾ ರಾವ್, ಡಾ. ರೇಣುಕಾ ಮಂಜುನಾಥ್, ಡಾ. ಜಗದೀಶ್, ಡಾ. ಅಭಿಷೇಕ್, ಡಾ. ಶ್ರೀಕಾಂತ್, ಡಾ. ಅಶ್ವಿನಿ, ಡಾ. ರಮೇಶ್, ಡಾ. ಸಂಗೀತಾ, ಡಾ. ರಾಘವೇಂದ್ರ, ಡಾ. ಪ್ರಣಿತಾ ಹಾಗೂ ಡಾ. ಸಂಗೀತಾ ಕಟ್ಟಿಮನಿ ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರು ಶಿಬಿರದಲ್ಲಿ ಸೇವೆ ಸಲ್ಲಿಸಿದರು.
ಮಿಲ್ಲರ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ಇಂತಹ ಉಚಿತ ಆರೋಗ್ಯ ಸೇವಾ ಕಾರ್ಯಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಆಯೋಜಕರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ವಾರ್ಡಿನ ಮುಖಂಡರಾದ ಹುಂಡೇಕರ್ ರಾಕೇಶ್, ವೆಂಕಟೇಶ, ಮಂಜುನಾಥ್, ಬಸವರಾಜ್ ಕುಂಬಿ, ರುದ್ರೇಶ್ , ಕಿರಣ್ , ಮನೋಜ್ , ವಿನಯ್ , ಅಭಿಷೇಕ್, ರಾಮಕೃಷ್ಣ, ಮೋಹನ್,ಸ್ವಾಮಿ ನಾಯಕ್, ಗಾದಿಲಿಂಗ, ದುರ್ಗಪ್ಪ, ರವಿ ಅಪ್ಪು, ರಾಮಾಂಜನಿ, ರಮಾಲಿ ನಾಯಕ್, ಎಲ್ಲಪ್ಪ, ಫೈಜಾನ್, ಪವನ್ ಕುಮಾರ್, ವೀರೇಶ್, ದಸ್ತಗಿರಿ, ಬಸವರಾಜ್, ಮಿಥುನ್ ಕುಮಾರ್, ಕೇದಾರನಾಥ್, ಗೋವಿಂದ ನಾಯಕ್, ರಾಮಕೃಷ್ಣ, ಶೇಖರ್, ಇಮಾಮ್ ಹುಸೇನ್, ಮಬ್ಬು, ಸುರೇಶ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ವೈದ್ಯಕೀಯ ಸಿಬ್ಬಂದಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ