LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವರುಣಾರ್ಭಟ: ಇಂದು ಈ ಐದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ರಾಜ್ಯದಲ್ಲಿ ಕೆಲವೆಡೆ ವರುಣನ ಆರ್ಭಟ ಮುಂದುವರಿದಿದ್ದು, ಕರಾವಳಿ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಕಳೆದ ನಾಲ್ಕು ದಿನದಿಂದ ಮಳೆಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇನ್ನು ಜಿಲ್ಲೆಗಳ ಬಹುತೇಕ ಎಲ್ಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.


ಹೀಗಾಗಿ ಕಾಫಿನಾಡು ಚಿಕ್ಕಮಗಳೂರು ಹಾಗೂ ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಮಳೆಯಿಂದ ಕಳೆದ ಮೂರು ದಿನಗಳಿಂದಲೂ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ನಾಲ್ಕನೇ ದಿನವೂ ರಜೆ ಮುಂದುವರಿದಿದೆ.

https://bcsuddi.com/%e0%b2%a8%e0%b2%82%e0%b2%a6%e0%b2%bf%e0%b2%a8%e0%b2%bf-%e0%b2%b9%e0%b2%be%e0%b2%b2%e0%b2%bf%e0%b2%a8-%e0%b2%a6%e0%b2%b0-5-%e0%b2%b0%e0%b3%82-%e0%b2%b9%e0%b3%86%e0%b2%9a%e0%b3%8d%e0%b2%9a%e0%b2%b3-2/


ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮಲೆನಾಡು ಭಾಗದ ಕೊಪ್ಪ, ಶೃಂಗೇರಿ, ಕಳಸ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಜಾಗರ, ವಸ್ತಾರೆ, ಖಾಂಡ್ಯ, ಆಲ್ದೂರು, ಆವತಿ ಹೋಬಳಿ ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಮಳೆಯಿಂದಾಗಿ ಎಲ್ಲಾ ಜೀವ ನದಿಗಳು ಅಪಾಯದ ಮಟ್ಟ ಮೀರಿ‌ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು‌ ನುಗ್ಗಿದೆ. ನದಿ ಸಮೀಪದ ಬಹುತೇಕ ದೇವಾಲಯಗಳು ಜಲಾವೃತಗೊಂಡಿದೆ. ಇಡೀ ಜಿಲ್ಲಾದ್ಯಂತ ಮಳೆಯ ಆರ್ಭಟಕ್ಕೆ ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.




ಉಡುಪಿ ಜಿಲ್ಲೆಯಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು, ಇಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಮುಂದುವರಿದಿದ್ದು, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

















Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುದ್ದೆಗಳ ಆಯ್ಕೆ ಪಟ್ಟಿಗೆ ಆಕ್ಷೇಪಣೆg ಆಹ್ವಾನHDK, ಯತ್ನಾಳ್, ಅಶ್ವತ್ಥ ನಾರಾಯಣಗೆ ಬಿಗ್ ಶಾಕ್!ತೆಲುಗುವಿನ ಮೆಗಾ ಸ್ಟಾರ್ ಚಿರಂಜೀವಿ ಮತ್ತೆ ಕನ್ನಡದಲ್ಲಿ ನಟಿಸುತ್ತಾರ.? ಯಾರ ಜೊತೆ.?--ಅಂಬಿಗರ ಚೌಡಯ್ಯಅವರ ವಚನ …!ನಟಿ ಜಾಕ್‌ಲೀನ್ ಫೆರ್ನಾಂಡಿಸ್ ಗೆ ಜೈಲಿನಿಂದಲೇ ಧಮಕಿ ಹಾಕಿದ ವಂಚಕ ಸುಕೇಶ್ !ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್