E-PAPER
17 Nov 2026, 12:22:21 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಸತಿರಹಿತರ ಆಶ್ರಯ ಕೇಂದ್ರಗಳ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ಬೆಳಗಾವಿ-06: ನಗರದಲ್ಲಿರುವ ಐದು ವಸತಿರಹಿತರ ಆಶ್ರಯ ಕೇಂದ್ರಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವುದರ ಜತೆಗೆ ಊಟ ಹಾಗೂ ಇತರೆ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಸಮರ್ಪಕವಾಗಿ ನಿರ್ವಹಿಸಬೇಕು. ಅಗತ್ಯವಿದ್ದವರಿಗೆ ಇದರ ಪ್ರಯೋಜನ ದೊರಕಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಾಗಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಡೇ ನಲ್ಮ್ ಯೋಜನೆಯ ವಸತಿರಹಿತರ ಆಶ್ರಯ ಕೇಂದ್ರಗಳ ನಗರ ಮಟ್ಟದ ಅಧಿಕಾರಯುಕ್ತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಸತಿರಹಿತರಿಗೆ ತಕ್ಷಣಕ್ಕೆ ಅನುಕೂಲವಾಗುವಂತೆ ನಗರದಲ್ಲಿರುವ ಐದು ಕೇಂದ್ರಗಳ ವಿಳಾಸ, ದೂರವಾಣಿ ಸಂಖ್ಯೆ, ಲಭ್ಯವಿರುವ ವಸತಿ ಸೌಲಭ್ಯ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಚುರಪಡಿಸಬೇಕು.

ಇದರಿಂದ ವಸತಿರಹಿತರಿಗೆ ತುರ್ತಾಗಿ ವಸತಿ ಸೌಲಭ್ಯವನ್ನು ಒದಗಿಸಲು ಅನುಕೂಲವಾಗುತ್ತದೆ. 

ಐದು ಕೇಂದ್ರಗಳಲ್ಲಿರುವ ವಸತಿ ಸಾಮರ್ಥ್ಯ, ಆಯಾ ದಿನ ಆಶ್ರಯ ಪಡೆದಿರುವ ಜನರ ಮಾಹಿತಿಯ ರಿಜಿಸ್ಟರ್ ನಿರ್ವಹಿಸಬೇಕು. ಇದಲ್ಲದೇ ಪ್ರತಿ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಬೇಕು; ಡೇ ನಲ್ಮ್ ಮಾರ್ಗಸೂಚಿ ಪ್ರಕಾರ ಊಟವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ವಸತಿರಹಿತರನ್ನು ಕರೆತರಲು ಅನುಕೂಲವಾಗುವಂತೆ ಮಹಾನಗರ ಪಾಲಿಕೆ ಅಥವಾ ಸಿಎಸ್ ಆರ್ ಫಂಡ್ ನಲ್ಲಿ ವಾಹನ ಖರೀದಿಸಬಹುದು ಎಂದು ಹೇಳಿದರು.

ಸ್ವಂತ ಕಟ್ಟಡ ನಿರ್ಮಾಣಕ್ಕೆ ಕ್ರಮ:

ಐದು ಕೇಂದ್ರಗಳ ಪೈಕಿ ಒಂದು‌ ಸ್ವಂತ ಕಟ್ಟಡದಲ್ಲಿರುವುದರಿಂದ ಉಳಿದ ನಾಲ್ಕು ಕೇಂದ್ರಗಳಿಗೆ ಸ್ಥಳ ನಿಗದಿಪಡಿಸಿದರೆ ಡೇ ನಲ್ಮ್ ಅನುದಾ‌ನದಲ್ಲಿ ಸ್ವಂತ ಕಟ್ಟಡ ನಿರ್ಮಿಸಬಹುದು ಎಂದು ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಹೇಳಿದರು.

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಆದಷ್ಟು ಬೇಗನೇ ವಸತಿರಹಿತರ ಆಶ್ರಯ ಕೇಂದ್ರಗಳ ಸ್ವಂತ ಕಟ್ಟಡ ಹೊಂದಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ ಅವರು, ವಸತಿರಹಿತರ ಆಶ್ರಯ ಕೇಂದ್ರಗಳ ನಿರ್ವಹಣೆಯ ಕುರಿತು ಸಭೆಯಲ್ಲಿ ವಿವರಿಸಿದರು.

ಉಪ ವಿಭಾಗಾಧಿಕಾರಿ ಶ್ರವಣ ನಾಯಕ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಉದಯಕುಮಾರ್ ತಳವಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.