ವಾಕಿಂಗ್ ಮಾಡುತ್ತಿದ್ದ ಮಹಿಳೆಗೆ ಕಿಸ್ ಕೊಟ್ಟು ಪರಾರಿ..!
ಬೆಂಗಳೂರು: ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಗೆ ಕಿಸ್ ಕೊಟ್ಟು ಆತ ಪರಾರಿಯಾದ ಘಟನೆ ಬೆಂಗಳೂರಿನ ಕೋಣನಕುಂಟೆ ಬಳಿಯ ಕೃಷ್ಣಾ ನಗರದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮಹಿಳೆಯು ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಾಗೆಯೇ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಜನ ಆಕ್ರೋಶವನ್ನೂ ವ್ಯಕ್ತಪಡಿಸುತ್ತಿದ್ದಾರೆ. ಶುಕ್ರವಾರ (ಆಗಸ್ಟ್ 2) ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್ ಮಾಡುವಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ. ವಿಡಿಯೋ ವೈರಲ್ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಹೆಣ್ಣುಮಕ್ಕಳ ಆಭರಣ, ಮೊಬೈಲ್ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗುವುದು ಸೇರಿ ಹಲವು ಕೃತ್ಯ ಎಸಗುತ್ತಿರುವ ಇಂತಹ ದುಷ್ಕರ್ಮಿಗಳನ್ನು ಪೊಲೀಸರು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.