LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮತ್ತೋರ್ವ ಆರೋಪಿಯ ಬಂಧಿಸಿದ ಎಸ್‌ಐಟಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಸಾಯಿತೇಜ ಎಂಬುವರ ಹೆಸರು ಚಂದ್ರಶೇಖರ್​ ಡೆತ್​​ನೋಟ್​​​ನಲ್ಲಿ ಇತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಸಾಯಿತೇಜನನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

ಇವರ ಬಳಿ ಹಣಕಾಸು ವರ್ಗಾವಣೆ ಸಂಬಂಧದ ಕೆಲವು ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂಬುವುದು ತಿಳಿಬಂದಿದೆ. ಆತ್ಮಹತ್ಯೆಗೆ ಶರಣಾದ ನಿಗಮದ ಅಧಿಕಾರಿ ಚಂದ್ರಶೇಖರನ್ ಬರೆದಿದ್ದ ಮರಣಪತ್ರದಲ್ಲಿ ಸಾಯಿತೇಜ ಹೆಸರು ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಸಾಯಿತೇಜ ಅವರನ್ನು ವಶಕ್ಕೆ ಪಡೆದಿದ್ದಾರೆ.

ಸಾಯಿತೇಜ್​​​ನನ್ನು ಎಸ್‌ಐಟಿ ಅಧಿಕಾರಿಗಳು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಸಾಯಿತೇಜ ಈ ಹಿಂದೆ ಬಂಧಿಸಲ್ಪಟ್ಟ ಸತ್ಯನಾರಾಯಣ ವರ್ಮಾ ಸಹಚರನಾಗಿದ್ದು, ಹೈದ್ರಾಬಾದ್​ನ ಕೋ-ಆಪರೇಟಿವ್ ಬ್ಯಾಂಕ್ ವೊಂದರಲ್ಲಿ ನಕಲಿ ಖಾತೆ ತೆರೆಯುವಲ್ಲಿ ಈ ಇಬ್ಬರದ್ದು ಪ್ರಮುಖ ಪಾತ್ರವಿದೆ ಎಂಬ ಆರೋಪ ಕೇಳಿಬಂದಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನಮೊಡವೆ ಕಾಟ ನಿವಾರಿಸಲು ಬಾಳೆಹಣ್ಣು ಸಿಪ್ಪೆಯನ್ನು ಹೀಗೆ ಬಳಸಿ..!ಆಧಾರ್‌ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲರಾಜ್ಯದಲ್ಲಿ ಭರ್ಜರಿ ಉದ್ಯೋಗ: 40,000 ರೂ. ವೇತನ