ವಾಲ್ಮೀಕಿ ನಿಗಮ ಹಗರಣ - ಚಾರ್ಜ್‌ಶೀಟ್ ಸಲ್ಲಿಸಿದ ಎಸ್‌ಐಟಿ
ಬೆಂಗಳೂರು: ವಾಲ್ಮಿಕಿ ನಿಗಮ ಹಗರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಹೈಗ್ರೌಂಡ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಸುಮಾರು 3,000 ಸಾವಿರ ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಸತ್ಯನಾರಾಯಣ ವರ್ಮಾ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ತೇಜ, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸುಮಾರು 3000 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಸಾಕಷ್ಟು ಸಾಕ್ಷ್ಯಗಳನ್ನ ದಾಖಲಿಸಿದ್ದಾರೆ. ಸುಮಾರು 50 ಕೋಟಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನ ಸೀಜ್ ಮಾಡಿ ನ್ಯಾಯಾಲಯದ ಸುಪರ್ದಿಗೆ ನೀಡಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.