LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಾಲ್ಮೀಕಿ ಹಗರಣ: ಹಣ ಲೂಟಿಗಾಗಿ ನಕಲಿ ವ್ಯಕ್ತಿ ಸೃಷ್ಟಿ ಮಾಡಿ ಹುದ್ದೆ ನೀಡಿದ್ದ ಎಂಡಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ. ಹಣ ಲೂಟಿ ಮಾಡಲು ನಕಲಿ ವ್ಯಕ್ತಿಯನ್ನು ಸೃಷ್ಟಿ ಮಾಡಿ ಹುದ್ದೆಯನ್ನು ಕೂಡ ನೀಡಲಾಗಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ.

ವಾಲ್ಮೀಕಿ ನಿಗಮದ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಪ್ರಕರಣದ ತನಿಖೆಯನ್ನು ಇಡಿ ಕೈಗೆತ್ತಿಗೊಂಡ ಬಳಿಕ ದಿನಕ್ಕೊಂದು ಸ್ಫೋಟಕ ಮಾಹಿತಿಗಳು ಹೊರ ಬರುತ್ತಿದೆ. ಇದೀಗ ಎಂಡಿ ಪದ್ಮನಾಭ್ ಕೋಟಿ ಕೋಟಿ ಹಣವನ್ನು ಲೂಟಿ ಮಾಡಲು ನಕಲಿ ವ್ಯಕ್ತಿಯನ್ನೇ ಸೃಷ್ಟಿಸಿ ನಿಗಮದಲ್ಲಿ ಹುದ್ದೆಯನ್ನು ನೀಡಿದ್ದರು. ಈ ನಕಲಿ ವ್ಯಕ್ತಿ 45 ಕೋಟಿ ರೂ. ಹಣ ವ್ಯವಹಾರ ಮಾಡಿದ್ದ ಎಂದು ತಿಳಿದುಬಂದಿದೆ.

ಎಂಡಿ ಪದ್ಮನಾಭ್ ಕೋಟ್ಯಾಂತರ ರೂ. ಲೂಟಿ ಹೊಡೆಯಲು ಶಿವಕುಮಾರ್ ಎಂಬ ವ್ಯಕ್ತಿಯನ್ನು ಸೃಷ್ಟಿಸಿ, ಆತನಿಗೆ ಜ್ಯೂನಿಯರ್ ಅಕೌಂಟೆಂಟ್ ಹುದ್ದೆಯನ್ನು ನೀಡಿದ್ದರು. ಈ ನಕಲಿ ವ್ಯಕ್ತಿಗೆ ಜ್ಯೂನಿಯರ್ ಅಕೌಂಟೆಂಟ್ ಎಂಬ ಐಡಿ ಕಾರ್ಡ್ ನೀಡಿ ಹಣಕಾಸು ವ್ಯವಹಾರ ನೋಡಿಕೊಳ್ಳುವ ಅಧಿಕಾರ ನೀಡಲಾಗಿತ್ತು.

ಹಣಕ್ಕೆ ಕನ್ನ ಹಾಕಲು ನಕಲಿ ವ್ಯಕ್ತಿಯ ಹೆಸರಿನಲ್ಲಿ ಫೆ. 21ರಂದು ಖಾತೆ ಓಪನ್ ಆಗುತ್ತದೆ. ಈ ಶಿವಕುಮಾರ್ ಖಾತೆಗೆ ನಿಗಮದಿಂದ 187 ಕೋಟಿ ರೂ. ವರ್ಗಾವಣೆಗೆ ಮನವಿ ಹೋಗುತ್ತದೆ. ಮನವಿ ಮೇರೆಗೆ ನಿಗಮದಿಂದ ಮಾ 5ರಿಂದ ಮೇ 6 ರವರೆಗೆ 187 ಕೋಟಿ ರೂ. ಹಣ ವರ್ಗಾವಣೆಯಾಗುತ್ತದೆ. ಶಿವಕುಮಾರ್ ಖಾತೆಯಿಂದ ಹೈದರಾಬಾದ್‌ನ ಬ್ಯಾಂಕ್ ಒಂದಕ್ಕೆ ಹಣ ವರ್ಗಾವಣೆಯಾಗುತ್ತದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನ