ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳ 2024-25 ನೇ ಸಾಲಿನ ಪ್ರವೇಶಕ್ಕಾಗಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಹಿಂದಿನ ಎಸ್.ಹೆಚ್.ಪಿ. ಪೋರ್ಟಲ್ ಬದಲಾಗಿ ಇಲಾಖೆಯ ಹೆಚ್.ಎಂ.ಐ.ಎಸ್. ತಂತ್ರಾಂಶದ ಮೂಲಕ ಅರ್ಜಿಯನ್ನು ಸಲ್ಲಿಸಲು ಕೋರಿದೆ. ಒಂದು ವೇಳೆ ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಮ್ಯಾನುಯಲ್ ಅರ್ಜಿಯನ್ನು ಜುಲೈ 15ರ ಒಳಗಾಗಿ ಸಂಬಂಧಿಸಿದ ನಿಲಯ ಪಾಲಕರಿಗೆ, ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಹಿರಿಯೂರು ಈ ಕಛೇರಿಗೆ ಸಲ್ಲಿಸಿ ಪ್ರವೇಶಾತಿ ಪಡೆಯಬಹುದು ಪ್ರಕಟಣೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.