LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿದ್ಯಾರ್ಥಿ ಸಾವಿನ ಬೆನ್ನಲ್ಲೇ ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

ಕಾರವಾರ : ಮುರುಡೇಶ್ವರ ಕಡಲ ತೀರದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಬೆನ್ನಲ್ಲೇ ಪ್ರವಾಸಿಗರಿಗೆ ಸಮುದ್ರಕ್ಕಿಳಿಯದಂತೆ ನಿರ್ಬಂಧ ವಿಧಿಸಲಾಗಿದೆ.

ಭಾನುವಾರ ಬೆಂಗಳೂರಿನ ಪಿ.ಯು ಕಾಲೇಜೊಂದರ ವಿದ್ಯಾರ್ಥಿ ಗೌತಮ್ (17) ಸಮುದ್ರದಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದನು. ಇನ್ನು ಈ ವೇಳೆ ಇನ್ನೋರ್ವ ಧನುಷ್ ಎಂಬಾತನನ್ನು ರಕ್ಷಿಸಲಾಗಿತ್ತು. ಈ ಅವಘಡದ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ನಿರ್ಬಂಧ ಹೇರಲು ಮುಂದಾಗಿದ್ದಾರೆ.

ವಾರಾತ್ಯವಾದ್ದರಿಂದ ಕಡಲ ತೀರಕ್ಕೆ ಹೆಚ್ಚು ಪ್ರವಾಸಿಗರು ಆಗಮಿಸಿದ್ದು, ಸಮುದ್ರಕ್ಕೆ ಇಳಿಯದಂತೆ ಮುರುಡೇಶ್ವರ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಇದರಿಂದಾಗಿ ಕಡಲ ತೀರ ಖಾಲಿ ಹೊಡೆಯುತ್ತಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST