LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿದ್ಯುತ್ ತಂತಿ ತಾಗಿ ತಂದೆ-ಮಗ ದಾರುಣ ಅಂತ್ಯ..!

ಮನೆ ಮುಂದೆ ಬೆಳೆದಿದ್ದ ಹುಲ್ಲು ತೆಗೆಯುವ ವೇಳೆ ವಿದ್ಯುತ್ ತಗುಲಿ ತಂದೆ, ಮಗ ದುರ್ಮರಣ ಹೊಂದಿದ ಘಟನೆ ಬೆಳಗಾವಿಯ ಉಡಿಕೇರಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ : ಮನೆ ಮುಂದೆ ಬೆಳೆದಿದ್ದ ಹುಲ್ಲು ತೆಗೆಯುವ ವೇಳೆ ವಿದ್ಯುತ್ ತಗುಲಿ ತಂದೆ, ಮಗ ದುರ್ಮರಣ ಹೊಂದಿದ ಘಟನೆ ಬೆಳಗಾವಿಯ ಉಡಿಕೇರಿ ಗ್ರಾಮದಲ್ಲಿ ನಡೆದಿದೆ.

ಕೃಷಿ ಕುಟುಂಬದ ಪ್ರಭು ಹುಂಬಿ (68), ಈತನ ಮಗ ಮಂಜುನಾಥ ಹುಂಬಿ (29) ಮೃತ ದುರ್ವಿಗಳು.

ಮನೆ ಮುಂದಿನ‌ ವಿದ್ಯುತ್ ಕಂಬಕ್ಕೆ ಬ್ಯಾಲೆನ್ಸ್ ಹಾಕಲಾಗಿದ್ದ ತಂತಿಗೆ ಮೇನ್ ಲೈನ್ ವಿದ್ಯುತ್ ತಂತಿ ಜೋಡಿಸಲಾಗಿತ್ತು.ಅಲ್ಲಿ ಬೆಳೆದಿದ್ದ ಹುಲ್ಲು ತೆಗೆಯುವ ವೇಳೆ ತಂದೆ ಪ್ರಭು ಹುಂಬಿಗೆ ವಿದ್ಯುತ್ ತಗುಲಿದೆ.

ಜೋರಾಗಿ ಕೂಗಿದ ತಂದೆಯನ್ನು ನೋಡಿ ಮಗ ಓಡಿ ಬಂದು ತಗುಲಿದ್ದ ವಿದ್ಯುತ್ ಬಿಡಿಸಲು ಧಾವಿಸಿದ.ಈ ವೇಳೆ ಮಗ ಮಂಜುನಾಥ ಹುಂಬಿಗೂ ವಿದ್ಯುತ್ ತಗುಲಿದೆ. ತಂದೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮಂಜುನಾಥನನ್ನು ಆಸ್ಪತ್ರೆಗೆ ದಾಖಿಲಿಸಿ ಚಿಕಿತ್ಸೆ ಕೊಡಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಹೃದಯ ವಿದ್ರಾವಕ ಘಟನೆಯಿಂದ ಗ್ರಾಮದಲ್ಲಿ ನಿರವ ಮೌನ ಆವರಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ ಅಂದರೆ ಈ ಸಣ್ಣ ಉಪಾಯ ಮಾಡಿ ದೇವರೇ ದಾರಿ ತೋರಿಸುತ್ತಾನೆ.-----ದಾಸೋಹದ ಸಂಗಣ್ಣ  ಅವರ ವಚನ …!ಅಡುಗೆ ಅನಿಲ ಆಧಾರ್ ಇ-ಕೆವೈಸಿ ಕುರಿತು ಸ್ಪಷ್ಟ ಮಾಹಿತಿ ಇಲ್ಲಿದೆ.!ಮಂಗಳೂರು: ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಕೆನಡಾ: ದೇವಸ್ಥಾನದ ಅಧ್ಯಕ್ಷ್ಯರ ಪುತ್ರನ ಮನೆಯ ಮೇಲೆ ಗುಂಡಿನ ದಾಳಿ - ಖಲಿಸ್ತಾನಿಗಳ ಕೈವಾಡ ಶಂಕೆಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್