LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿದ್ಯುತ್ ದುರಂತಕ್ಕೆ 3 ಸಾವು - ಲಕ್ಷ್ಮೀ ಹೆಬ್ಬಾಳಕರ್ ಸ್ಥಳಕ್ಕೆ ಧಾವಿಸಿ ತಲಾ 2 ಲಕ್ಷ ರೂ.ಪರಿಹಾರ ಘೋಷಣೆ

ಬೆಳಗಾವಿ: ಶಾಹುನಗರದಲ್ಲಿ ವಿದ್ಯುತ್ ದುರಂತದಲ್ಲಿ 3 ಜನರು ಸಾವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧಾವಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿ ಸರಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಜೊತೆಗೆ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಸಹ ಆರ್ಥಿಕ ಸಹಾಯ ಮಾಡಿದ್ದಾರೆ.

ವಿದ್ಯುತ್ ಶಾಕ್ ನಿಂದ ಇಲ್ಲಿನ ಶಾಹುನಗರದ ಮನೆಯಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಅವಘಡ ನಡೆದಿದ್ದು ಅಜ್ಜ, ಅಜ್ಜಿ, ಮೊಮ್ಮಗಳು ಸೇರಿ ಮೂವರು ಮೃತಪಟ್ಟಿದ್ದಾರೆ.

ವಾಚಮನ್ ಕೆಲಸ ಮಾಡುತ್ತಿದ್ದ ಈರಪ್ಪಾ ಲಮಾಣಿ (50), ಶಾಂತವ್ವ ಲಮಾಣಿ (45) ಹಾಗೂ ಇವರ ಮೊಮ್ಮಗಳು ಅನ್ನಪೂರ್ಣ ಲಮಾಣಿ ( 8) ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಲಕ್ಷ್ಮೀ ಹೆಬ್ಬಾಳಕರ್, ಮೃತ ಕುಟುಂಬದವರಿಗೆ ಸಾಂತ್ವನ ಹೇಳಿ, ಧೈರ್ಯವನ್ನು ತುಂಬಿದರು. ಜತೆಗೆ ಮುಖ್ಯಮಂತ್ರಿಗಳಿಗೆ ಸ್ಥಳದಿಂದಲೇ ಕರೆ ಮಾಡಿ ಈ ಘಟನೆಯ ಬಗ್ಗೆ ವಿವರಿಸಿ, ಪ್ರತಿ ವ್ಯಕ್ತಿಗೆ ತಲಾ 2 ಲಕ್ಷ ರೂ,ಗಳನ್ನು ಮಂಜೂರು ಮಾಡಿ ಕೊಡುವಂತೆ ಕೋರಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ತ್ವರಿತಗತಿಯಲ್ಲಿ ಪರಿಹಾರದ ಹಣ ಬಿಡುಗಡೆಗೊಳಿಸಲು ಆದೇಶ ಹೊರಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೌರ ಮೇಲ್ಛಾವಣಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ..!ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ - ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆವಿದೇಶದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಮೇಲೆ ದಾಳಿ: 43 ಶಂಕಿತರ ಗುರುತಿಸಿದ ಎನ್ಐಎಅಕ್ರಮ ಮರ ಕಡಿತ ಪ್ರಕರಣ – ಬಿಜೆಸಿ ಸಂಸದ ಪ್ರತಾಪ್ ಸಿಂಹ ಸಹೋದರನಿಗೆ ಜಾಮೀನು ಮಂಜೂರುರಾಮಜನ್ಮಭೂಮಿ ಮತ ಪಡೆಯುವ ವಿಚಾರವಲ್ಲ, ಇದು ಸಾಂಸ್ಕೃತಿಕ ವಿಷಯವಾಗಿದೆ - ರಾಜನಾಥ್ ಸಿಂಗ್ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆಡಿಸಿಎಂ ಡಿಕೆಶಿ ಹೂಡಿಕೆ ಮಾಡಿದ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್ಹೊಸ ವರ್ಷಾಚರಣೆ ಸಂಭ್ರಮದಲ್ಲಿ ನೂಕುನುಗ್ಗಲು - ಮಹಿಳೆ ಅಸ್ವಸ್ಥ, ಯುವತಿಗೆ ಕಿರುಕುಳತಿಳಿಸಾರು ಮಾಡುವ ವಿಧಾನ..!ಪೈನಾಪಲ್‌ ಹಣ್ಣಿನ ಆರೋಗ್ಯ ಪ್ರಯೋಜನಗಳು