E-PAPER
17 Nov 2026, 12:23:06 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ವಿದ್ಯೆ ಸುಂದರ ವ್ಯಕ್ತಿತ್ವವನ್ನು ರೂಪಿಸುತ್ತದೆ* : ಡಾ. ಅಲ್ಲಮಪ್ರಭು ಮಹಾಸ್ವಾಮೀಜಿ

ಬೆಳಗಾವಿ-10:ಜಗತ್ತಿನಲ್ಲಿ ಯಾರಿಂದಲೂ ಕದಿಯಲಾಗದ, ಯಾರಿಗೂ ತೆರಿಗೆ ರೂಪದಲ್ಲಿ ನೀಡಲಾಗದ, ಯಾರಿಗೂ ಪಾಲು ನೀಡಲಾಗದ ಹಾಗೂ ಎಷ್ಟೇ ಖರ್ಚು ಮಾಡಿದರೂ ತೀರದ ಸಂಪತ್ತು ವಿದ್ಯೆ. ಅಂತಹ ವಿದ್ಯೆ ಒಂದಿದ್ದರೆ ಎಂತಹ ಸಂಕಷ್ಟದಿಂದಲೂ ಪಾರಾಗಬಹುದಲ್ಲದೇ ಅದು ನಮ್ಮೆಲ್ಲರ ವ್ಯಕ್ತಿತ್ವವನ್ನು ಸುಂದರಗೊಳಿಸುತ್ತದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು. ಅವರು  ಶಿವಬಸವ ನಗರದ ಪ್ರಭುದೇವ ಸಭಾಗ್ರಹದಲ್ಲಿ ಹಮ್ಮಿಕೊಂಡಿದ್ದ ಸಿದ್ಧರಾಮೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ 'ಶಾಲಾ ಸಂಸತ್ತು ಹಾಗು ಸಾಂಸ್ಕೃತಿಕ ಸಂಘಗಳ' ಉದ್ಘಾಟನಾ ಸಮಾರಂಭದ ಸಾನಿಧ್ಯವಹಿಸಿ ಆಶೀರ್ವಚನ ನೀಡುತ್ತಾ ಮಾತನಾಡಿದರು. ಮುಂದುವರೆದು ಮಾತನಾಡಿದ ಶ್ರೀಗಳು ಶ್ರದ್ಧೆ, ಪ್ರಾಮಾಣಿಕತೆ, ನಿಷ್ಠೆಯಿಂದ ಬಾಲ್ಯದಿಂದಲೇ ನಿರಂತರವಾಗಿ ಪ್ರಯತ್ನಿಸಿದರೆ ಒಲಪಿಂಕ್ ಪದಕ ಗಳಿಸುವುದು ಕಷ್ಟಸಾಧ್ಯವಲ್ಲ. ದೊಡ್ಡಗುರಿಯೊಂದಿಗೆ ನಿರಂತರ ಶ್ರಮಪಟ್ಟರೆ ಯಾವುದೂ ಅಸಾಧ್ಯವಲ್ಲ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಚಿಂತಾಮಣರಾವ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಬಸವರಾಜ ಹಣ್ಣೂರ ಮಾತನಾಡಿ ಎಲ್ಲರಿಂದ ತಿರಸ್ಕಾರಕ್ಕೆ ಒಳಗಾಗಿ ನೆಲಕ್ಕೆ ಚೆಲ್ಲಲ್ಪಟ್ಟ ಬೀಜವೇ ಮುಂದೊಂದು ದಿನ ಮೊಳಕೆಯೊಡೆದು ಹೆಮ್ಮರವಾಗುವಂತೆ, ವಿದ್ಯಾರ್ಥಿಗಳು ತಾನು ದಡ್ಡ, ನನ್ನ ತಲೆಗೆ ವಿದ್ಯೆ ಹತ್ತುವುದಿಲ್ಲ ಎಂಬ ಕೀಳರಿಮೆಯಿಂದ ಹೊರಬಂದು ನಿರಂತರ ಅಧ್ಯಯನಶೀಲರಾಗಿ ಉನ್ನತ ಸಾಧನೆ ಮಾಡಬೇಕೆಂದು ಪ್ರೇರೇಪಿಸಿದರು.
ಇನ್ನೋರ್ವ ಅತಿಥಿ ಯರಗಟ್ಟಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಕಿರಣ ಚೌಗಲೆ ಮಾತನಾಡಿ ವಿದ್ಯಾರ್ಥಿಗಳು ಕೇವಲ ಪುಸ್ತಕದ ಹುಳುಗಳಾಗದೇ ಪಠ್ಯೇತರ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡರೆ ಅಂತವರ ಶೈಕ್ಷಣಿಕ ಪ್ರಗತಿ ಇಮ್ಮಡಿಯಾಗುತ್ತದೆ. ವಿದೇಶಿ ಶೈಲಿಯ ಬಟ್ಟೆಯಿಂದ ಯಾರೂ ಆಧುನಿಕರಾಗುವುದಿಲ್ಲ. ಆದರೆ ಉತ್ತಮ ಸಂಸ್ಕೃತಿ, ಒಳ್ಳೆಯ ಆಚಾರ ವಿಚಾರ, ಸಮಾಜಮುಖಿ ಕಾರ್ಯಗಳಿಂದ ಎಲ್ಲರೂ ಆಧುನಿಕರಾಗಬಹುದು ಎಂದರು.

ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ. ಬಿ. ಹಿರೇಮಠ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿನಿಯರು ಪ್ರಸ್ತುತಪಡಿಸಿದ "ಧರ್ಮವ ಬೆಳಗಿದೆ ಅಣ್ಣಾ, ಕರ್ಮವ ಕಳೆದೆ ಅಣ್ಣಾ, ಬಾ ಬಾರೋ ಈ ಧರೆಗೆ ಬಸವಣ್ಣ" ಎಂಬ ನೃತ್ಯ ಎಲ್ಲರ ಮನಸೂರಿಗೊಂಡಿತು.

ಶಾಲೆಯ ಉಪಪ್ರಾಚಾರ್ಯ ಶಿವಲೀಲಾ ಪೂಜಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಮನೋಹರ ಉಳ್ಳೇಗಡ್ಡಿ ನಿರೂಪಿಸಿದರು. ಶಿಕ್ಷಕರಾದ ಲಕ್ಷ್ಮಣ ಮೆಳವಂಕಿ, ಜಾನಕಿ ಚೌಗಲೆ ಪರಿಚಯಿಸಿದರೆ ಇನ್ನೋರ್ವ ಶಿಕ್ಷಕ ಎಮ್. ಬಿ. ಬೆಳಗಾವಿ ಶಾಲಾ ಸಾಂಸ್ಕೃತಿಕ ಚಟುವಟಿಕೆಗಳ ವರದಿ ವಾಚಿಸಿದರು. ಕೊನೆಗೆ ಶಿಕ್ಷಕಿ ಪ್ರೀತಿರಾಣಿ ಸಿದ್ರಾಮಣಿ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.