LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಧಾನಸಭಾ ಉಪಚುನವಣೆ: 'ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಗೆಲ್ಲುವುದರಲ್ಲಿ ಅನುಮಾನವಿಲ್ಲ'- ಪರಮೇಶ್ವರ್

ಮೈಸೂರು : ಎಲ್ಲ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವುದರಲ್ಲಿ ಅನುಮಾನವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶದ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ನಿರಾಶಾದಾಯಕವಾಗಿ ಮಾತಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೆಲವು ಬೂತ್‌ಗಳಲ್ಲಿ ಅವರ ಪರವಾಗಿ ವೋಟಿಂಗ್ ಆಗಿರಲ್ಲ, ಅದನ್ನು ಗಮನಿಸಿ ಅವರು ಹಾಗೆ ಹೇಳಿದ್ದಾರೆ ಎಂದಿದ್ದಾರೆ.

ಸಿದ್ದರಾಮಯ್ಯ ಒಬ್ಬ ಸಮರ್ಥ ನಾಯಕ, ಹಿಂದೆ ಸಿಎಂ ಆಗಿ 5-ವರ್ಷ ಉತ್ತಮ ಆಡಳಿತ ನೀಡಿದ್ದಾರೆ ಮತ್ತು ಈಗಲೂ ಸರ್ಕಾರವನ್ನು ಚೆನ್ನಾಗಿ ನಡೆಸುತ್ತಿದ್ದಾರೆ, ಹಾಗಾಗಿ ಬಿಜೆಪಿ ಮತ್ತು ಜೆಡಿಎಸ್ ನವರಿಗೆ ಅವರ ಮೇಲೆ ಅಸಮಾಧಾನ ಹುಟ್ಟಿಕೊಂಡು ಅವರನ್ನು ಪದಚ್ಯುತಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಅದೇ ಕಾರಣಕ್ಕೆ ಸಿದ್ದರಾಮಯ್ಯ ಶಾಸಕರಿಗೆ 50 ಕೋಟಿ ರೂ. ಆಫರ್ ನೀಡಿರುವ ಬಗ್ಗೆ ಮಾತಾಡಿದ್ದಾರೆ ಎಂದು ತಿಳಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST