E-PAPER
17 Nov 2026, 12:21:34 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿಭೇಟಿ ನೀಡಿದ್ದರು

ಬೆಳಗಾವಿ-19: ವಿಘ್ನ ವಿನಾಶಕ ಶ್ರೀ ಗಣೇಶನ ಹಬ್ಬದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣೇಶ ಮೂರ್ತಿಗಳ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಹೊನ್ನಿಹಾಳ, ಮೊದಗಾ, ಪಂತ ಬಾಳೇಕುಂದ್ರಿ ಹಾಗೂ ಬಾಳೇಕುಂದ್ರಿ ಕೆ.ಎಚ್. ಗ್ರಾಮಗಳಿಗೆ ಭೇಟಿ ನೀಡಿದ ಅವರು, ವಿವಿಧ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣೇಶ ಮೂರ್ತಿಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ, ಆರೋಗ್ಯ ಹಾಗೂ ನೆಮ್ಮದಿ ಕರುಣಿಸುವಂತೆ ಶ್ರೀ ಗಣೇಶನಲ್ಲಿ ಪ್ರಾರ್ಥಿಸಿದರು.
ಗಣೇಶೋತ್ಸವವು ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಜನರನ್ನು ಒಗ್ಗೂಡಿಸುವ ಹಾಗೂ ಸಾಮಾಜಿಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಮಹತ್ವದ ಹಬ್ಬವಾಗಿದೆ. ಗ್ರಾಮಗಳಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಎಲ್ಲ ವರ್ಗದ ಜನರು ಒಟ್ಟಾಗಿ ಹಬ್ಬವನ್ನು ಆಚರಿಸುತ್ತಿರುವುದು ನಮ್ಮ ಸಾಮಾಜಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.
ಪ್ರತಿ ಗ್ರಾಮದಲ್ಲೂ ಗಣೇಶೋತ್ಸವದ ಹಿನ್ನೆಲೆಯಲ್ಲಿ ನಿರ್ಮಿಸಲಾಗಿರುವ ಅಲಂಕೃತ ಮಂಟಪಗಳು ಹಾಗೂ ನಡೆದಾಡುತ್ತಿರುವ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅವರು ವೀಕ್ಷಿಸಿದರು. ಗಣೇಶೋತ್ಸವ ಮಂಡಳಿಗಳ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಚನ್ನರಾಜ ಹಟ್ಟಿಹೊಳಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, “ವಿಘ್ನ ವಿನಾಶಕ ಗಣಪತಿ ನಮ್ಮೆಲ್ಲರ ಬದುಕಿನಲ್ಲಿರುವ ಸಂಕಷ್ಟಗಳನ್ನು ದೂರ ಮಾಡಿ, ಉತ್ತಮ ಬದುಕಿನತ್ತ ಮುನ್ನಡೆಸಲಿ. ರೈತರು, ಕಾರ್ಮಿಕರು, ಯುವಕರು, ಮಹಿಳೆಯರು ಸೇರಿದಂತೆ ಸಮಾಜದ ಪ್ರತಿಯೊಬ್ಬರಿಗೂ ನೆಮ್ಮದಿ ಮತ್ತು ಸಮೃದ್ಧಿ ದೊರೆಯಲಿ. ನಮ್ಮ ಬೆಳಗಾವಿ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂಬುದು ಗಣೇಶನಲ್ಲಿ ನನ್ನ ಪ್ರಾರ್ಥನೆ” ಎಂದು ಹೇಳಿದರು.
ಗಣೇಶೋತ್ಸವದ ಸಂದರ್ಭದಲ್ಲಿ ಯುವಕರು ಹಾಗೂ ಸಾರ್ವಜನಿಕರು ಶಾಂತಿ, ಸೌಹಾರ್ದತೆ ಮತ್ತು ಭಕ್ತಿಭಾವದಿಂದ ಹಬ್ಬವನ್ನು ಆಚರಿಸಬೇಕು. ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ, ಸ್ವಚ್ಛತೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ಹಬ್ಬದ ಸಂಭ್ರಮವನ್ನು ಅರ್ಥಪೂರ್ಣಗೊಳಿಸಬೇಕು ಎಂದು ಅವರು ಕರೆ ನೀಡಿದರು.
ಗ್ರಾಮಗಳಿಗೆ ಆಗಮಿಸಿದ ಚನ್ನರಾಜ ಹಟ್ಟಿಹೊಳಿ ಅವರಿಗೆ ಸ್ಥಳೀಯರು ಹಾಗೂ ಗಣೇಶೋತ್ಸವ ಮಂಡಳಿಗಳ ಪದಾಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಮಹಿಳೆಯರು, ಯುವಕರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶನ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಗಣೇಶೋತ್ಸವ ಮಂಡಳಿಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.