E-PAPER
17 Nov 2026, 12:23:29 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ವೆಂಕಟೇಶ್ವರ ದೇವಸ್ಥಾನದ ಭೂಮಿ ಪೂಜೆ ಕಾರ್ಯಕ್ರಮ

ನಮ್ಮದು ಜನಪರ ನಿಲುವಿನ ಸರಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 

ಬೆಳಗಾವಿ-07: ರಡ್ಡಿ ಸಮಾಜ ಸ್ವಾಭಿಮಾನದ ಪ್ರತೀಕ. ಸಮಾಜದಲ್ಲಿನ ಬೆಂಕಿ ಆರಿಸಿ, ಸೌಹಾರ್ದತೆ ಕಾಪಾಡುವ ಸಮಾಜ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಪ್ರಾಯ ಪಟ್ಟಿದ್ದಾರೆ.

ಬೆಳಗಾವಿಯ ಕೆ ಕೆ ಕೊಪ್ಪದ ಬಳಿ ವೆಂಕಟೇಶ್ವರ ದೇವಸ್ಥಾನ, ಹೇಮರಡ್ಡಿ ಮಲ್ಲಮ್ಮ ಧ್ಯಾನ ಮಂದಿರ ಮತ್ತು ಕಲ್ಯಾಣ ಮಂಟಪ ನಿರ್ಮಾಣದ ಭೂಮಿ ಪೂಜೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಮ್ಮ ಗ್ರಾಮೀಣ ಕ್ಷೇತ್ರದಲ್ಲಿ ಇಂತಹ ದೇವಸ್ಥಾನ ನಿರ್ಮಾಣವಾಗುತ್ತಿರುವುದು ಕ್ಷೇತ್ರದ ಪಾಲಿನ ಸೌಭಾಗ್ಯವೆಂದೇ ಭಾವಿಸುತ್ತೇನೆ. ನಾನೇ ಮುಂದೆ ನಿಂತು, ಹೆಗಲಿಗೆ ಹೆಗಲು ಕೊಟ್ಟು ದೇವಸ್ಥಾನ ನಿರ್ಮಾಣ ಕಾರ್ಯದಲ್ಲಿ ಸಹಕರಿಸುತ್ತೇನೆ. ಇದು ನನ್ನದೇ ಸಮಾಜದ ಕಾರ್ಯ ಎಂದು ತಿಳಿದು ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುತ್ತೇನೆ. ಮುಂದಿನ ದಿನಗಳಲ್ಲಿ ಇಲ್ಲಿ ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸಿದರೂ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ನಮ್ಮ ಸರಕಾರ ಜನರಿಗೋಸ್ಕರ ಇರುವ ಸರಕಾರ. ಜನಪರ ನಿಲುವಿನ ಸರಕಾರ ಎಂದ ಅವರು, ಬೆಳಗಾವಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಈ ಸ್ಥಳವನ್ನು ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ನಾನು ಶಾಸಕಿಯಾದ ನಂತರ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ 140 ದೇವಸ್ಥಾನಗಳನ್ನು ಅಭಿವೃದ್ಧಿಪಡಿಸುತ್ತಿದ್ದೇನೆ. ಹಿರಿಯ ಸಚಿವರಾದ ಎಚ್.ಕೆ.ಪಾಟೀಲ ಅವರು ಸೌದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ಕ್ರಮ ತೆಗೆದುಕೊಂಡಿದ್ದಾರೆ. ಪ್ರಾಧಿಕಾರ ರಚಿಸಿ ಕೇಂದ್ರ ಸರಕಾರದಿಂದ 110 ಕೋಟಿ ರೂ. ಅನುದಾನ ತಂದಿದ್ದಾರೆ. ರಾಜಹಂಸಗಡ ಅಭಿವೃದ್ಧಿಗೂ ಈಗಾಗಲೆ ಒಂದು ಕೋಟಿ ರೂ. ಮಂಜೂರು ಮಾಡಿದ್ದು, ಇನ್ನೂ ಹೆಚ್ಚಿನ ಸಹಾಯ ನೀಡುವ ವಿಶ್ವಾಸವಿದೆ. ಅವರು ನನಗೆ ಆದರ್ಶ ವ್ಯಕ್ತಿ. ಅವರ ಸಲಹೆಗಳನ್ನು ಚಾಚೂ ತಪ್ಪದೆ ಪಾಲಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕಾರ್ಯಕ್ರಮದಲ್ಲಿ ಹರಿಹರ ತಾಲೂಕಿನ ಎರೆಹೊಸಳ್ಳಿಯ ರೆಡ್ಡಿ ಗುರುಪೀಠದ ಶ್ರೀ ವೇಮನಾನಂದ ಶ್ರೀಗಳು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಪ್ರವಾಸೋದ್ಯಮ ಮತ್ತು ಕಾನೂನು ಸಚಿವರಾದ ಎಚ್.ಕೆ.ಪಾಟೀಲ, ರಾಜ್ಯ ಸಭಾ ಸದಸ್ಯರಾದ ಈರಣ್ಣ ಕಡಾಡಿ, ಶಾಸಕರಾದ ಆಸೀಫ್ ಸೇಠ್, ಮಾಜಿ ಶಾಸಕರಾದ ಡಿ.ಆರ್.ಪಾಟೀಲ, ಆರ್.ವಿ.ಪಾಟೀಲ, ಇಂದಿರಾಬಾಯಿ ಮಳಲಿ, ರೆಡ್ಡಿ ಸಂಘದ ಅಧ್ಯಕ್ಷರೂ, ಬಾಲಾಜಿ ದೇವಸ್ಥಾನ ಟ್ರಸ್ಟ್ ಕಮಿಟಿಯ ಅಧ್ಯಕ್ಷರಾದ ರಾಮಣ್ಣ ಮುಳ್ಳೂರು, ಡಾ.ಗಿರೀಶ್ ಸೋನವಾಲ್ಕರ್, ರಮೇಶ್ ಜಂಗಲ್, ಎನ್.ವಿ.ಬರಮನಿ, ಪಾಂಡುರಂಗ ರಡ್ಡಿ ಸೇರಿದಂತೆ ಟ್ರಸ್ಟ್ ಪದಾದಿಕಾರಿಗಳು, ರೆಡ್ಡಿ ಸಮಾಜದ ಮುಖಂಡರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.