LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವೈದ್ಯರು ಜೆನೆರಿಕ್ ಔಷಧ ಮಾತ್ರ ಶಿಫಾರಸು ಮಾಡಬೇಕು ಎಂಬ ಆದೇಶಕ್ಕೆ ತಡೆ

ಹೊಸದಿಲ್ಲಿ: ವೈದ್ಯರು ಜೆನೆರಿಕ್ ಔಷಧಿಯನ್ನಲ್ಲದೆ ಮತ್ಯಾವ ಔಷಧವನ್ನೂ ಶಿಫಾರಸು ಮಾಡಬಾರದು ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗವು ಜಾರಿ ಮಾಡಿದ್ದ ಆದೇಶವನ್ನು ತಡೆ ಹಿಡಿಯಲಾಗಿದೆ. ಭಾರತೀಯ ವೈದ್ಯಕೀಯ ಒಕ್ಕೂಟ ಹಾಗೂ ಸ್ಥಾನಿಕ ವೈದ್ಯರ ಸಂಘದ ಮಹಾ ಒಕ್ಕೂಟವು ಕೇಂದ್ರ ಸರ್ಕಾರ ಹಾಗೂ ಕೇಂದ್ರ ಆರೋಗ್ಯ ಸಚಿವ ಮನ್ಷುಕ್ ಮಾಂಡವಿಯಾ ಅವರನ್ನು ಭೇಟಿಯಾದ ಬೆನ್ನಿಗೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು indiatoday.in ವರದಿ ಮಾಡಿದೆ.

ವೈದ್ಯರು ಕಡ್ಡಾಯವಾಗಿ ಜೆನೆರಿಕ್ ಔಷಧ ಶಿಫಾರಸು ಮಾಡುವುದು ಸೇರಿದಂತೆ ಇನ್ನಿತರ ಮಾರ್ಗಸೂಚಿಗಳನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗದ ನೋಂದಾಯಿತ ವೈದ್ಯಕೀಯ ವೃತ್ತಿಪರರು (ವೃತ್ತಿಪರ ನಡತೆ) ನಿಬಂಧನೆಗಳು, 2023 ಬಿಡುಗಡೆಗೊಳಿಸಿತ್ತು. ಜೆನೆರಿಕ್ ಔಷಧಿಗಳು ಬ್ರ್ಯಾಂಡೆಡ್ ಔಷಧಗಳ ವೆಚ್ಚಕ್ಕಿಂತ ಶೇ. 30ರಿಂದ ಶೇ. 80ರಷ್ಟು ಕಡಿಮೆ ಇರುವುದರಿಂದ ವೈದ್ಯಕೀಯ ವೆಚ್ಚಗಳು ಕಡಿತಗೊಳ್ಳಲಿವೆ ಎಂದು ಈ ನಿಯಂತ್ರಣ ಪ್ರಾಧಿಕಾರವು ಪ್ರತಿಪಾದಿಸಿತ್ತು.ಈ ಅಧಿಸೂಚನೆ ಜಾರಿಯಾದಾಗಿನಿಂದ, ರಾಷ್ಟ್ರೀಯ ವೈದ್ಯಕೀಯ ಆಯೋಗದ ಈ ಆದೇಶವನ್ನು ವೈದ್ಯರು ವಿರೋಧಿಸುತ್ತಿದ್ದಾರೆ. ಭಾರತದಲ್ಲಿನ ಜೆನೆರಿಕ್ ಔಷಧಗಳ ಗುಣಮಟ್ಟ ನಿಯಂತ್ರಣವು ದುರ್ಬಲವಾಗಿರುವುದರಿಂದ ಇಂತಹ ನಿಯಮಗಳು ರೋಗಿಗಳನ್ನು ಅಪಾಯಕ್ಕೆ ಸಿಲುಕಿಸಲಿವೆ ಎಂದು ವೈದ್ಯರು ವಾದಿಸುತ್ತಿದ್ದಾರೆ.ಇದಕ್ಕೂ ಮುನ್ನ, ಬ್ರ್ಯಾಂಡೆಡ್ ಔಷಧಗಳ ಹೆಸರಿಗೆ ಪರ್ಯಾಯವಾಗಿ ಜೆನೆರಿಕ್ ಔಷಧಗಳ ಹೆಸರನ್ನು ಶಿಫಾರಸು ಮಾಡದ ನೋಂದಾಯಿತ ವೈದ್ಯಕೀಯ ವೃತ್ತಿಪರರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ದಾಖಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!