LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವ್ಯೂಹಂ ಸಿನಿಮಾ ನಿರ್ದೇಶನ ಮಾಡಿದ್ದಕ್ಕೆ ಕೊಲೆ ಬೆದರಿಕೆ - ರಾಮ್ ಗೋಪಾಲ್ ವರ್ಮ

ವ್ಯೂಹಂ ಸಿನಿಮಾ ನಿರ್ದೇಶನ ಮಾಡಿದ್ದಕ್ಕೆ ತಮಗೆ ಕೊಲೆ ಬೆದರಿಕೆ ಹಾಕಲಾಗುತ್ತಿದೆ. ನನ್ನ ತಲೆ ಕತ್ತರಿಸಿದವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ತಗೆದುಕೊಳ್ಳಬೇಕು ಎಂದು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಆಂಧ್ರ ಪೊಲೀಸರ ಮೊರೆ ಹೋಗಿದ್ದಾರೆ.

ರಾಮ್ ಗೋಪಾಲ್ ವರ್ಮಾ ಕಚೇರಿಗೆ ಟಿಡಿಪಿ ಕಾರ್ಯಕರ್ತರು ಮತ್ತು ಎನ್.ಟಿ.ಆರ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದರು. ಹೈದರಾಬಾದ್ ನಲ್ಲಿರುವ ವರ್ಮಾ ಅವರ ಡೆನ್ ಕಚೇರಿಗೆ ಮುತ್ತಿಗೆ ಹಾಕಿರುವ ಕಾರ್ಯಕರ್ತರು ವ್ಯೂಹಂ ಸಿನಿಮಾದ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದರು.

ಆಂಧ್ರ ಪ್ರದೇಶ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದೇ ಸಮಯದಲ್ಲಿ ವ್ಯೂಹಂ ಸಿನಿಮಾ ರಿಲೀಸ್ ಆಗುತ್ತಿದೆ. ಇದು ಆಂಧ್ರದ ಸಿಎಂ ಜಗನ್ ಮೋಹನ್ ರೆಡ್ಡಿ ಜೀವನವನ್ನು ಆಧರಿಸಿದ ಸಿನಿಮಾವಾಗಿದ್ದು, ಚಂದ್ರಬಾಬು ನಾಯ್ಡು ಅವರನ್ನು ವಿಲನ್ ರೀತಿಯಲ್ಲಿ ಬಿಂಬಿಸಲಾಗಿದೆ ಎನ್ನುವುದು ಟಿಡಿಪಿ ಸದಸ್ಯರ ಆರೋಪ.

ಈ ಕಾರಣದಿಂದಾಗಿ ಚಿತ್ರಕ್ಕೆ ವಿರೋಧವನ್ನು ವ್ಯಕ್ತ ಪಡಿಸುತ್ತಿದ್ದಾರೆ.

ರಾಜಕೀಯವಾಗಿ ಏನೇ ಕಿತ್ತಾಟಗಳು ಇದ್ದರೂ, ಈ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ.

ಒಬ್ಬ ಸಿನಿಮಾ ಮೇಕರ್ ಆಗಿ ನನ್ನ ಕೆಲಸ ಮಾಡಿದ್ದೇನೆ. ಜನರು ಎಲ್ಲವನ್ನೂ ತೀರ್ಮಾನ ಮಾಡಲಿ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲೋಕಸಭಾ ಚುನಾವಣೆ ಬಳಿಕ ಮೊಬೈಲ್ ರೀಚಾರ್ಜ್ ಬೆಲೆ ಶೇ.25 ದುಬಾರಿಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: 18 ಕಡೆ ಎಸ್‌ಐಟಿ ರೇಡ್ - ಪ್ರೀತಂ ಗೌಡ ಆಪ್ತನ ಮನೆಯಲ್ಲಿ ಸಿಕ್ಕಿದ್ದಾದರೂ ಏನು?PDO ಹುದ್ದೆಗಳ ಭರ್ತಿಗೆ ಇಂದೇ ಕೊನೆಯ ದಿನ, ಆಸಕ್ತರು ಅರ್ಜಿ ಸಲ್ಲಿಸಿDHFL ಹಗರಣ: 34,000 ಕೋಟಿ ರೂ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಸಿಬಿಐನಿಂದ ಧೀರಜ್ ವಾಧವನ್‌ ಅರೆಸ್ಟ್ಮನೆಯ ಯಜಮಾನಿ ಮೃತಪಟ್ಟರೆ ಗೃಹಲಕ್ಷ್ಮಿ ಹಣ ಯಾರ ಖಾತೆಗೆ ಹೋಗುತ್ತೆ ಗೊತ್ತೇ?SSLC: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಬಂಪರ್ ಬಹುಮಾನ ನೀಡಿದ ಸಿದ್ದರಾಮಯ್ಯರುಚಿಕರವಾದ ವಾಂಗಿಬಾತ್ ಮಾಡುವ ವಿಧಾನಬಾಯಿಹುಣ್ಣನ್ನು ಗುಣಪಡಿಸುವ ನೈಸರ್ಗಿಕ ಮನೆಮದ್ದುಗಳುಮುಂದುವರದ ಮಳೆಯವರದಿ.! ರಾಜ್ಯಾದ್ಯಂತ ಭಾರೀ ಮಳೆ.!ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ