LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಬರಿಮಲೆಯಲ್ಲಿ ಖ್ಯಾತ ನಟಿ ಸಿತಾರಾ..!

ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳನ್ನು ಮಾಡಿರುವ ಸಿತಾರಾ, ಹಲವು ವರ್ಷಗಳಿಂದ ಚಿತ್ರೋದ್ಯಮದಲ್ಲಿ ಕಾಣಿಸಿಕೊಂಡಿರಲಿಲ್ಲ. ಅವರು ದೇಶದಲ್ಲಿ ಇದ್ದರಾ ಅಥವಾ ವಿದೇಶದಲ್ಲಿ ನೆಲೆಯೂರಿದ್ದರಾ ಎನ್ನುವ ಕುರಿತೂ ಮಾಹಿತಿ ಇರಲಿಲ್ಲ. ಇದೀಗ ಏಕಾಏಕಿ ಶಬರಿಮಲೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಚಿರಂಜೀವಿ ಸರ್ಜಾ ನಟನೆಯ ‘ಅಮ್ಮ ಐ ಲವ್ ಯೂ’ ಚಿತ್ರದ ನಂತರ ಬಹುತೇಕ ಚಿತ್ರರಂಗದಿಂದಲೇ ದೂರವಿದ್ದ ಸಿತಾರಾಗೆ ಶಬರಿಮಲೆಗೆ ಹೋಗಬೇಕು ಎನ್ನುವ ಸಂಕಲ್ಪವಿತ್ತು ಎಂದು ಹೇಳಲಾಗುತ್ತಿದೆ. ಅದನ್ನು ಈಗ ಪೂರೈಸಿದ್ದಾರೆ. ಹಲವು ಮಹಿಳೆಯರ ಜೊತೆ ಶಬರಿಮಲೆಗೆ ಬಂದಿದ್ದ ಸಿತಾರಾ ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಕಾರ್ತಿಕ ಮಾಸದ ಆರಂಭದ ದಿನಗಳಲ್ಲಿ ಶಬರಿಮಲೆ ಬಾಗಿಲು ತೆರೆದಿರುತ್ತದೆ. ಹಾಗಾಗಿ ಇದೇ ಸಂದರ್ಭದಲ್ಲಿ ಸಿತಾರಾ ಅಯ್ಯಪ್ಪನ (Ayyappa) ದರ್ಶನಕ್ಕೆ ಆಗಮಿಸಿದ್ದಾರೆ. ಕುಟುಂಬದ ಸದಸ್ಯರು ಮತ್ತು ಆಪ್ತರೊಂದಿಗೆ ಶಬರಿಮಲೆಗೆ ಬಂದಿದ್ದ ಅವರು, ಅಯ್ಯಪ್ಪನ ದರ್ಶನ ಮಾಡಿದ್ದಾರೆ. ಆ ಫೋಟೋಗಳು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಕಣ್ಣೀರಿನ ಪಾತ್ರಗಳಿಗೆ ಹೇಳಿ ಮಾಡಿಸಿದಂತಿದ್ದರು ಸಿತಾರಾ. ಅದರಲ್ಲೂ ಹಾಲುಂಡ ತವರು ಸಿನಿಮಾ ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಕನ್ನಡದಲ್ಲೇ ಅವರು ಐವತ್ತಕ್ಕೂ ಹೆಚ್ಚು ಸಿನಿಮಾಗಳನ್ನು ಮಾಡಿದ್ದಾರೆ. ವಿಷ್ಣುವರ್ಧನ್ ಸೇರಿದಂತೆ ಹಲವು ಸ್ಟಾರ್ ನಟರ ಜೊತೆ ತೆರೆಹಂಚಿಕೊಂಡ ಹೆಗ್ಗಳಿಕೆ ಅವರದ್ದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗಳೂರು: ಅನ್ಯಮತೀಯ ಕೇರಳ ಜೋಡಿಗಳ ಮೇಲೆ ನೈತಿಕ ಪೊಲೀಸ್ ಗಿರಿ - ಮೂವರು ಅರೆಸ್ಟ್4 ವರ್ಷದೊಳಗಿನ ಮಕ್ಕಳಿಗೆ ಶೀತದ ಔಷಧ ನೀಡುವ ಮುನ್ನ ಹುಷಾರ್‌ : ಈ ಔಷಧಗಳಿಗೆ ನಿಷೇಧ ಹೇರಿದ ಕೇಂದ್ರ ಸರಕಾರನಾಲ್ವರು ಉಗ್ರರರಿಂದ ಒಳನುಸುಳಲು ಯತ್ನ: ಓರ್ವ ಉಗ್ರನ ಹತ್ಯೆಜ.6ರಂದು ಸೌರ ಮಿಷನ್ ಆದಿತ್ಯ L1 ಪಾಯಿಂಟ್‌ಗೆ ಪ್ರವೇಶಿಸಲಿದೆ - ಸೋಮನಾಥ್Coconut Rice Recipe : ಚಿತ್ರಾನ್ನದಷ್ಟೇ ರುಚಿಕರವಾದ ತೆಂಗಿನಕಾಯಿ ರೈಸ್‌ ರೆಸಿಪಿ ಒಮ್ಮೆ ಟ್ರೈ ಮಾಡಿಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯ