Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Koppal

ಶ್ರೀ ನುಲಿಯ ಚಂದಯ್ಯ, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ: ಪುಷ್ಪ ನಮನ ಸಲ್ಲಿಕೆ


ಕೊಪ್ಪಳ ಆಗಸ್ಟ್ 29 ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶ್ರೀ ನುಲಿಯ ಚಂದಯ್ಯನವರ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳ ಆಪ್ತ ಸಹಾಯಕಿ ವಿಜಯಲಕ್ಷ್ಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ಸಮಾಜದ ಮುಖಂಡರೊಂದಿಗೆ ಸೇರಿ ಶ್ರೀ ನುಲಿಯ ಚಂದಯ್ಯನವರ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
*ಶ್ರೀ ನುಲಿಯ ಚಂದಯ್ಯ ಜಯಂತಿ:* 12ನೇ ಶತಮಾನದ ಮಹಾನ್ ಶರಣ, ವಚನಕಾರ ಹಾಗೂ ಕಾಯಕಯೋಗಿ ಶ್ರೀ ನುಲಿಯ ಚಂದಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಕೊರಮ ಸಮಾಜ ರಾಜ್ಯ ಉಪಾಧ್ಯಕ್ಷರಾದ ಕಂಬಣ್ಣ ಭಜಂತ್ರಿ, ಸಮಾಜದ ಕೊಪ್ಪಳ ಜಿಲ್ಲಾಧ್ಯಕ್ಷರಾದ ಬಸವರಾಜ್ ಓಜನಹಳ್ಳಿ, ತಾಲೂಕ ಅಧ್ಯಕ್ಷರಾದ ಲಕ್ಷ್ಮಣ ಇಂದ್ರಪ್ಪ ಭಜಂತ್ರಿ, ತಾಲೂಕು ಉಪಾಧ್ಯಕ್ಷರಾದ ನಾಗರಾಜ್  ಭಜಂತ್ರಿ, ಸಮಾಜದ ಮುಖಂಡರಾದ ಹನುಮಂತ್ ಭಜಂತ್ರಿ, ಯಮನೂರು ಭಜಂತ್ರಿ, ಲಕ್ಷ್ಮಣ ಮಾಳಗಿ, ಹನುಮಂತ್ ಭಜಂತ್ರಿ, ಶರಣಪ್ಪ ಭಜಂತ್ರಿ, ಕರಿಯಪ್ಪ ಭಜಂತ್ರಿ ನಾಗಪ್ಪ ಹೇರೂರು, ಶಿವು ಭಜಂತ್ರಿ, ಹನುಮಂತ್ ಬಜಂತ್ರಿ, ಹುಲಿಗೇಶ್ ಹಾಗೂ ಮತ್ತಿತರಿದ್ದರು.
*ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ:* ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯ ಕಾರ್ಯಕ್ರಮದಲ್ಲಿ ಈಡಿಗ ಸಮಾಜದ ಜಿಲ್ಲಾ ಅಧ್ಯಕ್ಷರಾದ ಈರಣ್ಣ ಹುಲಿಗಿ, ಉಪಾಧ್ಯಕ್ಷರಾದ ಎ.ವಿ ರವಿ, ಸಮಾಜದ ಮುಖಂಡರಾದ ವೆಂಕಟೇಶ್ ಹೆಚ್. ಗಂಗಾವತಿ, ಅನಿಲ್ ಹುಲಿಗಿ, ಕಿರಣ ಕುಮಾರ್ ಗಂಗಾವತಿ, ಮಂಜುನಾಥ, ರಾಘವೇಂದ್ರ, ಮರಿಯಪ್ಪ, ಬಸವರಾಜ, ಶರಣಪ್ಪ, ರಮೇಶ, ನೀರುಪಾದಿ, ರಾಘವೇಂದ, ಮುನಿರಾಜ ಮತ್ತು ಅನೇಕರಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇತರೆ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.
****

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ