Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಶಾಲೆಯ ಮೆಟ್ಟಿಲಿನಲ್ಲಿ ಕಾಲುಜಾರಿ ಬಿದ್ದು 4ನೇ ತರಗತಿ ವಿದ್ಯಾರ್ಥಿನಿ ಸಾವು

https://x.com/YakkatiSowmith/status/2100942212137902537?ref_src=twsrc%5Etfw%7Ctwcamp%5Etweetembed%7Ctwterm%5E2100942212137902537%7Ctwgr%5Ea272b001c0de27ca3a3354cfb35027b374fd57da%7Ctwcon%5Es1_&ref_url=https%3A%2F%2Fwww.kannadaprabha.com%2Fnation%2F2026%2FSep%2F19%2Fwatch-class-4-student-dies-after-she-slips-falls-down-from-school-stairs-in-telangana

ಶಾದ್‌ನಗರ, ಸೆ. 19 : ಶಾಲೆಯ ಮೆಟ್ಟಿಲು ಹತ್ತುವ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು 9 ವರ್ಷದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿರುವ ದಾರುಣ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾದ್‌ನಗರದಲ್ಲಿ ನಡೆದಿದೆ.

ಶಾದ್‌ನಗರದ ಇಂಡಿಯನ್ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಈ ಘಟನೆ ಸಂಭವಿಸಿದೆ. ವರ್ಣಿಕಾ (9) ಮೃತಪಟ್ಟ ವಿದ್ಯಾರ್ಥಿನಿ ಎಂದು ವರದಿಯಾಗಿದೆ.

ವರ್ಣಿಕಾ ತನ್ನ ಸಹಪಾಠಿಗಳೊಂದಿಗೆ ಶಾಲೆಯ ಮೆಟ್ಟಿಲು ಹತ್ತುತ್ತಿದ್ದ ವೇಳೆ ಏಕಾಏಕಿ ಕಾಲುಜಾರಿ ಮುಖ ಕೆಳಗಾಗಿ ಬಿದ್ದಿದ್ದಾಳೆ. ಪರಿಣಾಮ ಮುಖ ಹಾಗೂ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿ ಪ್ರಜ್ಞೆ ಕಳೆದುಕೊಂಡಿದ್ದಳು. ಶಾಲಾ ಸಿಬ್ಬಂದಿ ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.

ಸಿಸಿಟಿವಿಯಲ್ಲಿ ಸೆರೆಯಾದ ಘಟನೆ

ಶಾಲೆಯ ಮೆಟ್ಟಿಲುಗಳ ಸಮೀಪ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ವಿದ್ಯಾರ್ಥಿನಿ ಕಾಲುಜಾರಿ ಬೀಳುವ ದೃಶ್ಯ ಸೆರೆಯಾಗಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಶಾದ್‌ನಗರ ಪೊಲೀಸರು ಪರಿಶೀಲಿಸುತ್ತಿದ್ದು, ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ