LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ - 11 ನವಜಾತ ಶಿಶುಗಳು ಬೆಂಕಿಗಾಹುತಿ

ಲಕ್ನೋ: ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡು 11 ನವಜಾತ ಶಿಶುಗಳು ಬೆಂಕಿಗಾಹುತಿಯಾದ ದಾರುಣ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಈ ಭೀಕರ ಬೆಂಕಿ ಅಪಘಾತದಲ್ಲಿ ಸುಮಾರು 11 ನವಜಾತ ಶಿಶುಗಳು ಸುಟ್ಟು ಕರಕಲಾಗಿವೆ. ಮಕ್ಕಳ ವಾರ್ಡ್‌ನ ಕಿಟಕಿ ಒಡೆದು ಹಲವು ಕಂದಮ್ಮಗಳನ್ನು ರಕ್ಷಿಸಲಾಗಿದೆ. ಆಸ್ಪತ್ರೆಯ ಆವರಣದಲ್ಲಿ ಮಕ್ಕಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.

ಅಪಘಾತದ ಸಮಯದಲ್ಲಿ ಸುಮಾರು 54 ನವಜಾತ ಮಕ್ಕಳನ್ನು NICU ವಾರ್ಡ್‌ನಲ್ಲಿ ದಾಖಲಿಸಲಾಗಿತ್ತು. ಈ ಬಗ್ಗೆ ಪ್ರತಿಕ್ರಿಸಿರುವ ಜಿಲ್ಲಾಧಿಕಾರಿ ಅವಿನಾಶ್ ಕುಮಾರ್, ಪ್ರಾಥಮಿಕವಾಗಿ ಶಾರ್ಟ್​ ಸರ್ಕ್ಯೂಟ್​ ಬೆಂಕಿಗೆ ಕಾರಣವೆಂದು ಶಂಕಿಸಲಾಗಿದೆ. ಈ ಅವಘಡದಲ್ಲಿ 11 ಮಕ್ಕಳು ಸಾವನ್ನಪ್ಪಿದ್ದಾರೆ. ಸುಮಾರು 40 ಶಿಶುಗಳನ್ನು ಉಳಿಸಲಾಗಿದೆ. ಈ ಪೈಕಿ 16ಕ್ಕೂ ಹೆಚ್ಚು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ನಿಗಾ ವಹಿಸಲಾಗಿದೆ. ವೈದ್ಯಕೀಯ ಕಾಲೇಜಿನಲ್ಲಿ ದಾಖಲಾದ ಮಕ್ಕಳ ವಯಸ್ಸು ಒಂದು ದಿನದಿಂದ ಒಂದು ತಿಂಗಳವರೆಗೆ ಇದೆ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!ಹೃದಯಘಾತದಿಂದ 15 ವರ್ಷ ಬಾಲಕ ಸಾವು.!ಆಗಸ್ಟ್ 15 ರಿಂದ ಮತ್ತೆ ಮಳೆಯ ಅಬ್ಬರ: ಹವಾಮಾನ ಇಲಾಖೆ.!ಶಿಕ್ಷಕರಿಗೆ ಮಾಹಿತಿ.! ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ.!ಚಿತ್ರದುರ್ಗ : ಮಹಾನಗರ ಪಾಲಿಕೆಯನ್ನಾಗಿಸಲು ನಕಾಶೆ ತಯಾರಿ: ಶಾಸಕ ಕೆ. ಸಿ ವೀರೇಂದ್ರ ಪಪ್ಪಿ.!ಒಳ ಮೀಸಲಾತಿ: ಛಲವಾದಿ ಜನಾಂಗದ ನಿಖರವಾದ ಸಂಖ್ಯೆ ಇಲ್ಲ.! ಹೆಚ್.ಸಿ.ನಿರಂಜನಮೂರ್ತಿ