LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಂಗಳೂರಿನಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆಗೊಳಿಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು,ನಗರ ಜಿಲ್ಲಾ ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಅವರು ಬಿಬಿಎಂಪಿ, ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದಾರೆ.

ವಿಧಾನಸೌಧದಲ್ಲಿ ಬಿಬಿಎಂಪಿ, ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಸಭೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ಮಾಡಲಿದ್ದು, ಅಂದ್ರಹಳ್ಳಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿರುವುದ ವರದಿ ಪಡೆದುಕೊಳ್ಳಲಿದ್ದಾರೆ. ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ನಿರ್ಧರಿಸಿದ್ದಾರೆ.

ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಘಟನೆ ಸಂಬಂಧ ಮಧ್ಯಾಹ್ನ 3 ಗಂಟೆಗೆ ಸಭೆ ಕರೆದಿದ್ದೇನೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ. ಇತ್ತೀಚೆಗೆ ಆದ ಘಟನೆ ಬಗ್ಗೆಯೂ ಕ್ರಮ ತೆಗೆದುಕೊಂಡಿದ್ದೇವೆ. ಶಾಲಾ ಮಕ್ಕಳನ್ನು ಯಾರೂ ದುರುಪಯೋಗ ಮಾಡಿಕೊಳ್ಳಬಾರದು. ಎನ್‌ಎಸ್‌ಎಸ್‌ ಇತ್ತು, ಗಿಡ ನೆಡುವುದು, ಸ್ವಚ್ಛತೆ ಮಾಡುವ ಕೆಲಸ ಮಾಡುತ್ತಿದ್ದರು. ಆದ್ರೆ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ ಎಂದು ಖಡಕ್ ಆಗಿ ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋವಿಶೀಲ್ಡ್ ಅಡ್ಡಪರಿಣಾಮ: 'ದೇಣಿಗೆಗಾಗಿ ಬಿಜೆಪಿ ಜನರ ಜೀವ ಅಡವಿಟ್ಟಿತು'- ಅಖಿಲೇಶ್ ಯಾದವ್ ಕಿಡಿ'ಮುಸ್ಲಿಮರು ಮಾತ್ರ ಹೆಚ್ಚು ಮಕ್ಕಳನ್ನು ಹೊಂದುತ್ತಾರೆಯೇ? ಬಡವರು ಹೆಚ್ಚು ಮಕ್ಕಳನ್ನು ಹೊಂದಿರುತ್ತಾರೆ'- ಖರ್ಗೆ ತಿರುಗೇಟುಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!ಪ್ರಜ್ವಲ್ 600 ಹುಡುಗಿಯರ ಸೀರೆ ಎಳೆದಿದ್ದಾನೆ; ಅವ್ರು ಗರ್ಭಿಣಿ ಆದ್ರೆ ಅವರ ಮಕ್ಕಳಿಗೆ ಪರಿಹಾರ ಕೊಡೋದು ಯಾರು?ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!ಅತ್ತೆ – ಅಳಿಯ ಲವ್; ಹೆಂಡತಿಯನ್ನೇ ತ್ಯಾಗ ಮಾಡಿದ ಪತಿ! ಏನಿದು ಕಥೆ?'ಚುನಾವಣೆಯಲ್ಲಿ ನಿಂತಿರೋದು ಲಕ್ಷ್ಮೀ ಹೆಬ್ಬಾಳ್ಕರ್ ಮಗನಲ್ಲ ನಾನೆಂದು ಮತ ಹಾಕಿ'- ಸಿಎಂಕೋಮುದ್ವೇಷದಿಂದ ಕೊಲೆ ಪ್ರಕರಣ : ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ...!!ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಎಂಟ್ರಿ ನೀಡಿದ ಮಕ್ಕಳ ಆಯೋಗಪಶ್ಚಿಮ ಬಂಗಾಳದ ರಾಜಭವನ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಬೆದರಿಕೆ