LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಾಸಕ ಮುನಿರತ್ನ ವಿರುದ್ದ ಎಫ್‌ಐಆರ್ ದಾಖಲು

ಬೆಂಗಳೂರು: ರಾಜರಾಜೇಶ್ವರಿ ನಗರದ ಶಾಸಕ ಎನ್ ಮುನಿರತ್ನ ವಿರುದ್ದ ಚಿಕ್ಕಾಜಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಸ್ಪೋಟಿಸಿದ ಆರೋಪದ ಮೇಲೆ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರು ಉತ್ತರದದ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹುಣಸಮಾರನಹಳ್ಳಿಯಲ್ಲಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಿದ್ದು, ಜೊತೆಗೆ ಅಕ್ರಮವಾಗಿ ಜಿಲೆಟಿನ್ ಸ್ಪೋಟಿಸಲಾಗಿತ್ತು.ಈ ಬಗ್ಗೆ ಹುಣಸಮಾರನಹಳ್ಳಿ ಗ್ರಾಮದ ಜನರು ಅಕ್ರಮ ಜಿಲೆಟಿನ್ ಸ್ಪೋಟ ತಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಧರಣಿ, ಪ್ರತಿಭಟನೆ ನಡೆಸಿದ್ದರು.

ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಯಲಹಂಕ ತಹಶೀಲ್ದಾರ್ ಅನಿಲ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಈ ವೇಳೆ ಅಕ್ರಮವಾಗಿ ಜಿಲೆಟಿನ್ ಸ್ಪೋಟಗೊಳಿಸಿರುವುದು ಪತ್ತೆಯಾಗಿತ್ತು. ಹೀಗಾಗಿ ತಹಶೀಲ್ದಾರ್ ಜುಲೈ.10ರಂದು ಬ್ಲಾಸ್ಟಿಂಗ್ ಮಾಡಿದ ಆರೋಪದ ಮೇರೆಗೆ ಶಾಸಕ ಮುನಿರತ್ನ ಇತರ ಆರೋಪಿಗಳಾದ ಆನಂದನ್ , ಗಣೇಶ್, ರಾಧಮ್ಮ ವಿರುದ್ಧ ದೂರು ನೀಡಿದ್ದರು. ಅವರ ದೂರಿನ ಮೇರೆಗೆ ಈಗ ಎಫ್‌ಐಆರ್ ದಾಖಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆಕೇಬಲ್ ಟೆವಿಲಿಷನ್ ಮೇಲ್ವಿಚಾರಣಾ ಸಮಿತಿ ಸಭೆ : ಜಾಹಿರಾತು ಸಂಹಿತೆ ಪಾಲನೆ ಮಾಡುವುದು ಕಡ್ಡಾಯ; ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ-----ಬಿಬ್ಬಿ ಬಾಚಯ್ಯ  ಅವರ ವಚನ …!ತ್ರಿಶೂರ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋಕಂಟಕವಾದ ಹೊಸ ಮೊಬೈಲ್‌- ಬ್ಲಾಸ್ಟ್‌ ಆಗಿ ಯುವಕ ಸೇರಿದ ಆಸ್ಪತ್ರೆ!'ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ, ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ'-ಡಿಸಿಎಂಸೈಬರ್ ವಂಚಕರ ಬಲೆಗೆ ಬಿದ್ದ ನಟಿ ಅಂಜಲಿ ಪಾಟೀಲ್ - 5.79 ಲಕ್ಷ ರೂ. ಪಂಗನಾಮನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ - ರಾಷ್ಟ್ರಪತಿಗೆ ತಮಿಳುನಾಡು IRS ಅಧಿಕಾರಿ ಪತ್ರ'ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ತಂದಿರುವ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ' - ಹೆಚ್​ಡಿಕೆJOB NEWS : 2250 ಕಾನ್ಸ್ ಟೇಬಲ್, SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ