LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್ ಹೆಡ್ ಮತ್ತು ಸಹಿ ಬಳಕೆ.!

 

ಬೆಂಗಳೂರು: ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್ ಹೆಡ್ ಮತ್ತು ಸಹಿ ಬಳಸಿಕೊಂಡು ಆಪ್ತ ಸಹಾಯಕರಾಗಿ ವಿಧಾನಸಭಾ ಸಚಿವಾಲಯದಿಂದ ಮಹಿಳೆಯೊಬ್ಬರು ನೇಮಕಾತಿ ಆದೇಶ ಪಡೆದಿದ್ದಾರೆ.

ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಧಾನಸಭಾ ಸಚಿವಾಲಯದ ಅಧೀನ ಕಾರ್ಯದರ್ಶಿ ಲಲಿತಾ ಅವರು ನೀಡಿದ ದೂರು ಆಧರಿಸಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ನಿವಾಸಿ ಕೆ.ಸಿ. ವಿನುತಾ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಕೆ.ಸಿ. ವಿನುತಾ ಅವರನ್ನು ತಮ್ಮ ಆಪ್ತ ಸಹಾಯಕರನ್ನಾಗಿ ನೇಮಿಸುವಂತೆ ಶಾಸಕರು ಮನವಿ ಮಾಡಿರುವ ರೀತಿ ಲೆಟರ್ ಹೆಡ್ ನಲ್ಲಿ ಪತ್ರ ತಯಾರಿಸಿ ಸಹಿ ಮಾಡಿ ವಿಧಾನಸಭೆ ಸಚಿವಾಲಯಕ್ಕೆ ಸಲ್ಲಿಸಲಾಗಿದೆ. ಶಾಸಕರೇ ನೀಡಿದ ಪತ್ರ ಇದೊಂದು ಭಾವಿಸಿದ ಸಚಿವಾಲಯದ ಅಧಿಕಾರಿಗಳು ವಿನುತಾ ಅವರನ್ನು ಆಪ್ತ ಸಹಾಯಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ಬಳಿಕ ಅದು ನಕಲಿ ಎಂದು ಗೊತ್ತಾಗಿ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST