LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಿಕ್ಷಕರಾಗುವವರಿಗೆ ಗುಡ್ ನ್ಯೂಸ್.! ಸಚಿವ ಎಸ್. ಮಧು ಬಂಗಾರಪ್ಪ

ಕೊಪ್ಪಳ : ಶೀಘ್ರದಲ್ಲಿ ಹತ್ತು ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಶಾಲಾ-ಕಾಲೇಜುಗಳ ನಿರ್ಮಾಣವಲ್ಲದೆ ಶಿಕ್ಷಕರ ನೇಮಕಕ್ಕೂ ಆದ್ಯತೆ ನೀಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

ಕೊಪ್ಪಳದ ಕುಕನೂರ್ ತಾಲೂಕಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಿಕ್ಷಣ ಇಲಾಖೆ ಸಚಿವನಾದ ವೇಳೆ 53 ಸಾವಿರ ಶಿಕ್ಷಕರ ಕೊರತೆಯಿತ್ತು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಹತ್ತು ತಿಂಗಳೊಳಗೆ 12,000 ಶಿಕ್ಷಕರ ನೇಮಕಾತಿ ಮಾಡಿದೆ. ಈಗ ಹತ್ತು ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು

ಇಂದು ಅವರು, ಕುಕನೂರು ತಾಲೂಕಿನ ಕೋಮಲಾಪೂರ ಗ್ರಾಮದಲ್ಲಿ ಕೆಕೆಆರ್ಡಿಬಿ ಯೋಜನೆಯಡಿ ನಿರ್ಮಿಸಲಾದ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿ, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ 4,900 ಕಾಯಂ ಶಿಕ್ಷಕರನ್ನು ಮಾತ್ರ ನೇಮಿಸಿಕೊಂಡಿದೆ ಎಂದರು. ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲಾಗಿದೆ. ಹೀಗಾಗಿ ಫಲಿತಾಂಶ ಕುಸಿದಿದೆ. ಮಕ್ಕಳ ಶಿಕ್ಷಣ ಸುಧಾರಿಸಲು ಇಂತಹ ಕ್ರಮ ಅಗತ್ಯ ಎಂದು ಪ್ರತಿಕ್ರಿಯಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌WPL 2025: RCBಗೆ ಭಾರಿ ಆಘಾತ; ಸ್ಟಾರ್ ಸ್ಪಿನ್ನರ್ ಶ್ರೇಯಾಂಕ ಸರಣಿಯಿಂದಲೇ ಔಟ್ಕೇಜ್ರಿವಾಲ್ ಬಂಗಲೆ ‘ಶೀಶ್ ಮಹಲ್’ ನವೀಕರಣ ಹಗರಣದ ತನಿಖೆಗೆ ಕೇಂದ್ರ ಆದೇಶAICC ಪುನರಾಚನೆ: ಮತ್ತೆ ರಾಷ್ಟ್ರರಾಜಕಾರಣಕ್ಕೆ ಬಿ.ಕೆ. ಹರಿಪ್ರಸಾದ್