E-PAPER
17 Nov 2026, 12:22:42 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶಿಕ್ಷಕರಿಗೂ ಪ್ರತಿಭಾ ಕಾರಂಜಿ, ಕ್ರೀಡಾಕೂಟ: ಮುಂದಿನ ವರ್ಷ ಮೂರು ದಿನ ಶಿಕ್ಷಕರ ಹಬ್ಬ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ-10: ಶಿಕ್ಷಕರ ದಿನಾಚರಣೆಯನ್ನು ಮುಂದಿನ ವರ್ಷದಿಂದ ಮೂರು ದಿನಗಳ ವಿಶೇಷ ಕಾರ್ಯಕ್ರಮವಾಗಿ ಆಯೋಜಿಸಿ, ಶಿಕ್ಷಕರ ಪ್ರತಿಭೆ ಹಾಗೂ ಕ್ರೀಡಾಸಕ್ತಿಗೆ ವೇದಿಕೆ ಕಲ್ಪಿಸಲಾಗುವುದು ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಘೋಷಿಸಿದರು.

ಬೆಳಗಾವಿಯಲ್ಲಿ ನಡೆದ, ಗ್ರಾಮೀಣ ಕ್ಷೇತ್ರದ ಶಿಕ್ಷಕರ ದಿನಾಚರಣೆ, ಪ್ರತಿಭಾ ಕಾರಂಜಿ, ಕಲೋತ್ಸವ ಹಾಗೂ ಕ್ರೀಡಾಕೂಟಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪ್ರತಿವರ್ಷ ಶಿಕ್ಷಕರು ಮಕ್ಕಳಿಗಾಗಿ ಪ್ರತಿಭಾ ಕಾರಂಜಿ, ಕಲೋತ್ಸವ ಹಾಗೂ ಕ್ರೀಡಾಕೂಟಗಳನ್ನು ಆಯೋಜಿಸುತ್ತಾರೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅದನ್ನು ಹೊರತರುವ ಕೆಲಸ ಮಾಡುತ್ತಾರೆ. ಇದೇ ರೀತಿಯಲ್ಲಿ ಶಿಕ್ಷಕರ ಪ್ರತಿಭೆಗೂ ವೇದಿಕೆ ಕಲ್ಪಿಸುವ ಅಗತ್ಯವಿದೆ ಎಂದರು.
ಮುಂದಿನ ವರ್ಷದಿಂದ ಬೆಳಗಾವಿ ತಾಲೂಕು ಮಟ್ಟದಲ್ಲಿ ಶಿಕ್ಷಕರಿಗಾಗಿ ಮೂರು ದಿನಗಳ ವಿಶೇಷ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ತಮ್ಮ ಅಧ್ಯಕ್ಷತೆಯಲ್ಲಿ ಆಯೋಜಿಸುವುದಾಗಿ ಅವರು ಘೋಷಿಸಿದರು.
ಮೂರು ದಿನಗಳ ಕಾರ್ಯಕ್ರಮದಲ್ಲಿ ಮೊದಲ ದಿನ ಸಂಪೂರ್ಣವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮೀಸಲಿಡಲಾಗುವುದು. ಶಿಕ್ಷಕರಿಗಾಗಿ ನೃತ್ಯ, ಗಾಯನ, ರಂಗೋಲಿ, ನಾಟಕ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಎರಡನೇ ದಿನ ಕ್ರೀಡಾಕೂಟಕ್ಕೆ ಮೀಸಲಿದ್ದು, ಕಬಡ್ಡಿ, ಕ್ರಿಕೆಟ್, ಖೋಖೋ, 100 ಮೀಟರ್ ಓಟ, ಹೈಜಂಪ್, ಲೆಮನ್ ಅಂಡ್ ಸ್ಪೂನ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಗುವುದು. ಮೂರನೇ ದಿನ ಸಭಾ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳ ವಿಜೇತ ಶಿಕ್ಷಕರಿಗೆ ಬಹುಮಾನ ಮತ್ತು ಸನ್ಮಾನ ನೆರವೇರಿಸಲಾಗುವುದು ಎಂದು ತಿಳಿಸಿದರು.
“ಮಕ್ಕಳಿಗಾಗಿ ನೀವು ಪ್ರತಿಭಾ ಕಾರಂಜಿ, ಕಲೋತ್ಸವ ಮತ್ತು ಕ್ರೀಡಾಕೂಟಗಳನ್ನು ಮಾಡುತ್ತೀರಿ. ಆದರೆ ಶಿಕ್ಷಕರ ಪ್ರತಿಭೆಯನ್ನು ಹೊರತರುವ ಕಾರ್ಯಕ್ರಮವೂ ಇರಬೇಕು. ಶಿಕ್ಷಕರಿಗೆ ಒಂದು ದಿನದ ಕಾರ್ಯಕ್ರಮವಲ್ಲ, ಮೂರು ದಿನಗಳ ಸಂಭ್ರಮವನ್ನು ಆಯೋಜಿಸಬೇಕು ಎಂಬ ಆಲೋಚನೆ ನನಗೆ ಬಂದಿದೆ. ನಿಮ್ಮ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಮುಂದಿನ ವರ್ಷ ಈ ಕಾರ್ಯಕ್ರಮವನ್ನು ಆಯೋಜಿಸುತ್ತೇನೆ,” ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಶಿಕ್ಷಕರು ಕೇವಲ ಪಠ್ಯ ಬೋಧನೆ ಮಾಡುವವರಲ್ಲ; ಅವರು ಭವಿಷ್ಯದ ಪೀಳಿಗೆಯನ್ನು ರೂಪಿಸುವ ರಾಷ್ಟ್ರ ನಿರ್ಮಾತೃಗಳು ಎಂದು ಬಣ್ಣಿಸಿದ ಅವರು, ಒಬ್ಬ ವೈದ್ಯ, ಇಂಜಿನಿಯರ್, ವಿಜ್ಞಾನಿ, ಅಧಿಕಾರಿ, ರಾಜಕಾರಣಿ ಅಥವಾ ಯಾವುದೇ ಕ್ಷೇತ್ರದ ಸಾಧಕನ ಹಿಂದೆ ಶಿಕ್ಷಕರ ಮಾರ್ಗದರ್ಶನ ಮತ್ತು ಪರಿಶ್ರಮ ಇರುತ್ತದೆ ಎಂದರು.
ತಾವೂ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತಿದ್ದು, ಕನ್ನಡ ಶಾಲೆಯಲ್ಲಿ ಓದಿರುವ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದ ಹೆಬ್ಬಾಳಕರ್, “ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಜತೆಗೆ ಜೀವನವನ್ನು ಹೇಗೆ ಎದುರಿಸಬೇಕು, ಯಶಸ್ಸನ್ನು ಹೇಗೆ ಸಾಧಿಸಬೇಕು ಎಂಬುದನ್ನೂ ಕಲಿಸುತ್ತಾರೆ. ಶಿಕ್ಷಕರ ಸೇವೆಗೆ ಎಷ್ಟು ಗೌರವ ಸಲ್ಲಿಸಿದರೂ ಸಾಲದು” ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಆಗಮಿಸಲು ತಡವಾದ ಬಗ್ಗೆ ಶಿಕ್ಷಕರಲ್ಲಿ ಕ್ಷಮೆಯಾಚಿಸಿದ ಅವರು, ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳಿದ್ದ ಕಾರಣ ತಡವಾಯಿತು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ​ವೃಷಭೇಂದ್ರಯ್ಯ ಜೆ. ಡಿ, ಬಸವರಾಜ ರಾಯವ್ವಗೋಳ, ಜಂಗಲಿ ಸಾಬ್ ನಾಯಕ, ಜಯಕುಮಾರ್ ಹೆಬ್ಳಿ, ಆರ್. ಕೆ. ಆಂಜನೇಯ, ಯು.ಡಿ. ಹುನಕುಪ್ಪಿ, ಪುಂಡಲೀಕ್ ಚವ್ಹಾಣ, ಅನ್ವರ್ ಲಂಗೋಟಿ, ರಮೇಶ ಗೋಣಿ, ಆನಂದ ಕಾದ್ರೊಳ್ಳಿ, ಅಶೋಕ ಖೋತ, ಚಂದ್ರು ಕೋಲಕಾರ ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.