ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ: ಕಾಂಗ್ರೆಸ್ ಯಾಸಿರ್ ಅಹ್ಮದ್ ಖಾನ್ ಪಠಾಣ್ ಗೆ ಟಿಕೆಟ್.!
ಬೆಂಗಳೂರು: ಕರ್ನಾಟಕ ವಿಧಾನಸಭಾ ಉಪ ಚುನಾವಣೆಗೆ ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ಘೋಷಿಸಿದೆ.
ಕರ್ನಾಟಕದ ಸಂಡೂರು ವಿಧಾನ ಸಭಾ ಉಪ ಚುನಾವಣೆಗೆ ಇ.ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದಂತೆ ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ಘೋಷಿಸಲಾಗಿದೆ.
ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣಕ್ಕೆ ನವೆಂಬರ್.13ರಂದು ಮತದಾನ ನಡೆಯಲಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅಕ್ಟೋಬರ್.25, 2024 ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್.30, 2024 ಲಾಸ್ಟ್ ಡೇಟ್. ನವೆಂಬರ್.23ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಬಿಜೆಪಿಯಿಂದ ಸಂಡೂರು ಮತ್ತು ಶಿಗ್ಗಾಂವ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.