LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಿವಮೊಗ್ಗ: ಬಸ್ ಪಲ್ಟಿ, ಹಲವು ಪ್ರಯಾಣಿಕರಿಗೆ ಗಂಭೀರ ಗಾಯ..!

ಶಿವಮೊಗ್ಗ : ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ.

ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬ ಬಸ್ ಹೊಸನಗರದಿಂದ ಬರುತ್ತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತ್ತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು 15 ಜನರು ಗಾಯಗೊಂಡಿದ್ದಾರೆ ಎನ್ನಲಾಗುತಿದ್ದು, ಗಾಯಾಳುಗಳನ್ನು ರಿಪ್ಪನ್‌ಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಮಯ ಪ್ರಜ್ಞೆ ಮೆರೆದ ಪೊಲೀಸರು : ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಂಬುಲೆನ್ಸ್ ಗೆ ಸ್ಥಳೀಯರು ಕರೆ ಮಾಡಿದ್ದು ತುಂಬಾ ಸಮಯವಾದರೂ ಆಂಬುಲೆನ್ಸ್ ಬರಲಿಲ್ಲ. ಈ ವೇಳೆ ಸ್ಥಳಕ್ಕೆ ಆಗಮಿಸಿದ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿ ಗಾಯಾಳುಗಳನ್ನು ಪೊಲೀಸ್ ಜೀಪ್ ನಲ್ಲಿಯೇ ಕರೆದೊಯ್ಯುವ ಮೂಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿ: ಈಶ್ವರ ಖಂಡ್ರೆ.!