E-PAPER
17 Nov 2026, 12:22:50 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶಿವಾಪುರ ಗ್ರಾಮದಲ್ಲಿ ಅಡವಿಸಿದ್ದೇಶ್ವರ ಜಾತ್ರೆ ಅಂಗವಾಗಿ ಸೆಪ್ಟೆಂಬರ್ 13 ರಂದು ಶ್ರೀಮಠದ ಪೂಜ್ಯರಿಂದ ಜಂಗಮ ವಟುಗಳಿಗೆ ಅಯ್ಯಾಚಾರ, ಸಾಮೂಹಿಕ ಇಷ್ಟಲಿಂಗ ಪೂಜೆ ರುದ್ರಾಕ್ಷಿಧಾರಣೆ

ಮೂಡಲಗಿ-14: ನಮ್ಮ ಸಂಸ್ಕೃತಿ, ಆಚಾರ-ವಿಚಾರಗಳು ಹಾಗೂ ಪದ್ಧತಿಗಳನ್ನು ಮುಂದುವರಿಸಿಕೊಂಡು ಹೋಗುವುದು ಪ್ರತಿಯೊಬ್ಬರ ಕರ್ತವ್ಯ ಸಂಸ್ಕೃತಿ ರಕ್ಷಣೆ ಹಾಗೂ ಗ್ರಾಮದ ಅಭಿವೃದ್ಧಿಯ ನಡುವೆ ಸಮತೋಲನ ಕಾಯ್ದುಕೊಳ್ಳುವ ಧಾರ್ಮಿಕ ಕಾರ್ಯಗಳು ನಿಜಕ್ಕೂ ಶ್ಲಾಘನೀಯ ಎಂದು ರಾಜ್ಯಸಭಾ ಮಾಜಿ ಸಂಸದ ಈರಣ್ಣ ಕಡಾಡಿ ಹೇಳಿದರು.

ಸಮೀಪದ ಶಿವಾಪುರ ಗ್ರಾಮದಲ್ಲಿ ಅಡವಿಸಿದ್ದೇಶ್ವರ ಜಾತ್ರೆ ಅಂಗವಾಗಿ ಸೆಪ್ಟೆಂಬರ್ 13 ರಂದು ಶ್ರೀಮಠದ ಪೂಜ್ಯರಿಂದ ಜಂಗಮ ವಟುಗಳಿಗೆ ಅಯ್ಯಾಚಾರ, ಸಾಮೂಹಿಕ ಇಷ್ಟಲಿಂಗ ಪೂಜೆ ರುದ್ರಾಕ್ಷಿಧಾರಣೆ ಹಾಗೂ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯ ಅನುದಾನದಲ್ಲಿ ನವೀಕರಣಗೊಂಡ ಕಲ್ಯಾಣ ಮಂಟಪದ ಉದ್ಘಾಟನೆ ಹಾಗೂ ಮುತ್ತೈದೆಯರ ಉಡಿತುಂಬುವ ಕಾರ್ಯಕ್ರಮವನ್ನು ಸಸಿಗೆ ನೀರು ಉಣ್ಣಿಸುವ ಮೂಲಕ ಮಾಜಿ ಸಂಸದ ಈರಣ್ಣ ಕಡಾಡಿ ಚಾಲನೆ ನೀಡಿ ಮಾತನಾಡಿದರು.

ರಾಜ್ಯಸಭಾ ಸಂಸದನಾಗಿ ಶಿವಾಪುರ ಗ್ರಾಮವನ್ನು ಸಂಸದರ ಆದರ್ಶ ಗ್ರಾಮವಾಗಿ ತೆಗೆದುಕೊಂಡು ಒಂದು ಕೋಟಿ ರೂ.ಗಳ ಅನುದಾನ ನೀಡಿದ್ದನ್ನು ಗ್ರಾಮಸ್ಥರು ಸರಿಯಾಗಿ ಸದುಪಯೋಗ ಪಡಿಸಿಕೊಂಡಿದ್ದಾರೆ. ನನ್ನ ಅಧಿಕಾರಾವಧಿ ಮುಗಿದರೂ ಸಹ, ಬೇರೆಯವರ ಅನುದಾನ ತಂದಾದರೂ ಗ್ರಾಮದ ಅಭಿವೃದ್ದಿ ಕೆಲಸಗಳನ್ನು ಮಾಡಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ. ಶಿವಾಪುರ ಅಡವಿಸಿದ್ದರಾಮ ಪೂಜ್ಯರು ಅಡವಿಸಿದ್ದೇಶ್ವರ ಮಠಕ್ಕೆ ಬಂದ ನಂತರ ಇದು ಶಿವನಪುರ ಆಗಿದೆ ಎಂದು ಶ್ರೀಗಳ ಕಾರ್ಯವನ್ನು ಶ್ಲಾಘಿಸಿದರು.

ಚಿಂಚಣಿ ಶಿವಪ್ರಸಾದ ಸ್ವಾಮೀಜಿ ಮಾತನಾಡಿ, ತಾಯಂದಿರ ಉಡಿತುಂಬುವ ಕಾರ್ಯವು ಅತ್ಯಂತ ಪವಿತ್ರವಾದದ್ದು. 'ಸ್ವರ್ಗ ಎಲ್ಲಿದೆ ಎಂದರೆ ಅದು ತಾಯಂದಿರ ಪಾದದಲ್ಲಿದೆ' ಎಂದು ತಾಯಂದಿರ ಮಹತ್ವ ಹಾಗೂ ಸಮಾಜದಲ್ಲಿ ಅವರಿಗೆ ನೀಡಬೇಕಾದ ಗೌರವವನ್ನು ಬಣ್ಣಿಸಿದರು. ಪೂಜ್ಯ ಅಡವಿಸಿದ್ದರಾಮ ಸ್ವಾಮೀಜಿಯವರು ನಿರಂತರವಾಗಿ ನೆಲ, ಜಲ ಹಾಗೂ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ. ಸಮಾಜಮುಖಿ ಕಾರ್ಯಗಳಿಗೆ ತಮ್ಮನ್ನು ತಾವು ಅರ್ಪಿಸಿಕೊಂಡು ದುಡಿಯುತ್ತಿರುವ ಶ್ರೀಗಳ ಸೇವೆ ಅನನ್ಯವಾದದ್ದು ಎಂದರು.

ಡಾ.ಮಲ್ಲಿಕಾರ್ಜುನ ಬಿರನಗಡ್ಡಿ ಮಾತನಾಡಿ, 12 ನೇ ಶತಮಾನದಲ್ಲಿಯೇ ಜಗಜ್ಯೋತಿ ಬಸವಣ್ಣನವರು ತಮ್ಮ ವಚನಗಳ ಮೂಲಕ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದನ್ನು ಅಚ್ಚುಕಟ್ಟಾಗಿ ತಿಳಿಸಿದ್ದಾರೆ. ಪ್ರತಿಯೊಬ್ಬರೂ ವಚನ ಸಾಹಿತ್ಯವನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಹಾಗೂ ಪೂಜ್ಯರ ಮಾರ್ಗದರ್ಶನವನ್ನು ಜೀವನದಲ್ಲಿ ಪಾಲಿಸಬೇಕು ಎಂದು ಸಲಹೆ ನೀಡಿದರು.

ನಾಗನೂರಿನ ಲಕ್ಷ್ಮಣ ಯಡ್ರಾವಿ ಅವರು, "ಭಾರತೀಯ ಸಂಸ್ಕೃತಿಯಲ್ಲಿ ತಾಯಂದಿರ ಹಣೆಯ ಮೇಲಿನ ಅರಿಶಿನ-ಕುಂಕುಮವನ್ನು ಕಂಡು ಅತ್ಯಂತ ಸಂತೋಷವಾಯಿತು. ಇದು ಮುಂದಿನ ಪೀಳಿಗೆಗೆ ಉತ್ತಮ ಮಾದರಿಯಾಗಿದೆ," ಎಂದು ಹರ್ಷ ವ್ಯಕ್ತಪಡಿಸಿದರು.

ಶಿವಾಪುರ ಪೂಜ್ಯಶ್ರೀ ಅಡವಿಸಿದ್ದರಾಮ ಸ್ವಾಮಿಜಿಗಳ ದಿವ್ಯಸಾನ್ನಿಧ್ಯ ವಹಿಸಿದ್ದರು. ಚಿಕ್ಕೋಡಿಯ ಪೂಜ್ಯ ಸಂಪಾದನಾ ಸ್ವಾಮಿಗಳು, ಡಾ. ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಗಳು, ನಿಡಗುಂದಿ ಕೊಪ್ಪದ ಪೂಜ್ಯ ಚನ್ನಬಸವ ಸ್ವಾಮಿಗಳು ಹಾಗೂ ಬಾಗೋಜಿಕೊಪ್ಪದ ಡಾ.ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಡಾ. ದಿನೇಶ್ ಕೌಶಿಕ. ವಕೀಲರಾದ ರುದ್ರಪ್ಪ ಬಾಗೋಜಿ, ಕೆಂಪ್ಪಣ್ಣ ಮುಧೋಳ, ಪರಗೌಡ ಪಾಟೀಲ, ಚನಬಸು ಬೆಳಗಲಿ, ಮಹಾದೇವ ಶೀಳನ್ನವರ, ಸತೀಶ ಜುಂಜರವಾಡ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಶ್ರೀಮಠದ ಭಕ್ತಾಧಿಗಳು ಉಪಸ್ಥಿತರಿದ್ದರು.

ಶ್ರೀ ಮಠದ ಪೂಜ್ಯರಿಗೆ ರುದ್ರಾಕ್ಷಿಧಾರಣೆ, ಸಾವಿರಾರೂ ತಾಯಂದಿರಿಗೆ ಉಡಿತುಂಬುವ ಕಾರ್ಯ ನಡೆಯಿತು. ಹಿರಿಯ ಮತ್ತು ಯುವ ನ್ಯಾಯವಾದಿಗಳಿಗೆ ಸನ್ಮಾನ ನಡೆಯಿತು. ಮಹಾಂತೇಶ ಕುಡಚಿ ಸ್ವಾಗತಿಸಿದರು, ಶಿಕ್ಷಕ ನಿರ್ವಾಣಿ ಹೆಬ್ಬಾಳಿ ಕಾರ್ಯಕ್ರಮ ನಿರೂಪಿಸಿದರು, ಉಮೇಶ ಮುಧೋಳ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.