LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ'- ಯತ್ನಾಳ್

ವಿಜಯಪುರ: ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಲೋಕಸಭೆ ಚುನಾವಣೆಯ 3ನೇ ಹಂತದ ಮತದಾನದ ವೇಳೆ ಮತ ಚಲಾಯಿಸಿ ನಂತರ ಮಾತನಾಡಿದ ಅವರು, ಪ್ರಜ್ವಲ್ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡವಿದೆ. ಸೋಮವಾರ ವಕೀಲ, ಬಿಜೆಪಿ ನಾಯಕ ದೇವೇರಾಜೇ ಗೌಡರು ಆರೋಪಿಸಿದಂತೆ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇರುವುದು ಸ್ಪಷ್ಟ ಎಂದರು.

ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್ಐಟಿ ಸಂಪೂರ್ಣವಾಗಿ ಡಿಕೆ ಶಿವಕುಮಾರ್ ವಶದಲ್ಲಿದೆ. ಅವರ ಆಣತಿಯಂತೆ ಕೆಲಸ ಮಾಡುತ್ತದೆ ಎಂದು ಆರೋಪ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST