E-PAPER
17 Nov 2026, 12:23:42 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶೀಘ್ರವೇ ಸರ್ಕಾರಿ ಮಾಂಟೆಸ್ಸರಿ ಯೋಜನೆ ವಿಸ್ತರಣೆ

ರಾಜ್ಯ ಸರ್ಕಾರದ ಯೋಜನೆಗೆ ಕೇಂದ್ರ ಸರ್ಕಾರದಿಂದ ಶಹಬ್ಬಾಸ್ ಗಿರಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ

ಭದ್ರಾವತಿ-11:ಇಡೀ ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾಗಿರುವ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ರಾಜ್ಯಾದ್ಯಂತ ಆರಂಭಿಸಲಾಗುತ್ತಿದ್ದು, ಇದಕ್ಕಾಗಿ 17,800 ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ 250 ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಭದ್ರಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಸಚಿವರು, ಇಡೀ ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ಕೂಡ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.

ಕೇಂದ್ರ ಸರ್ಕಾರ ಕೂಡ ಪೂರ್ವ ಪ್ರಾಥಮಿಕ ತರಗತಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರು ನಮ್ಮ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಚಿವೆ ಹೇಳಿದರು.

ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಕೆಲವೊಂದು ಮಾರ್ಗಸೂಚಿಗಳನ್ನು ಸಿದ್ಧಪಡಿಸಿಕೊಂಡಿದ್ದು, ಎರಡು ಕೊಠಡಿ, ಶೌಚಾಲಯ ವ್ಯವಸ್ಥೆ ಇರಬೇಕು. ಇಂಥ ವ್ಯವಸ್ಥೆ ಹೊಂದಿರುವ 17,800 ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳಲಿವೆ ಎಂದರು.

ಸಕ್ಷಮ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ 170 ಕೋಟಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಜೊತೆಯಾಗಿ ನಿರ್ವಹಿಸಲಾಗುವುದು ಎಂದರು.

* *ಡ್ಯಾಂಗಳ ಭದ್ರತೆಗೆ ಸಿಎಂ, ಡಿಸಿಎಂ ಸೂಚನೆ*
ರಾಜ್ಯದ ಬಹುತೇಕ ಜಲಾಶಯಗಳು 100 ವರ್ಷ, 50 ವರ್ಷ ಪೂರೈಸಿವೆ. ಹೀಗಾಗಿ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳು ಉದ್ಭವಿಸುವುದು ಸಹಜ. ತುಂಗಭದ್ರಾ ಡ್ಯಾಂ ಗೇಟ್‌ನ ಚೈನ್ ಕಟ್ ಆಗಿರುವುದಕ್ಕೆ ಸರ್ಕಾರದ ನಿರ್ಲಕ್ಷ್ಯ ಎಂದು ಹೇಳಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಎಲ್ಲಾ ಜಲಾಶಯಗಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.

ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕಾಂಗ್ರೆಸ್ ನವರು 50 ವರ್ಷದಲ್ಲಿ ಏನು ಮಾಡಿದ್ದಾರೆ ಎಂದು ಬಿಜೆಪಿ ಕೇಳುತ್ತಿದೆ. ಡ್ಯಾಂ ಕಟ್ಟಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಡ್ಯಾಂ ದುರಸ್ತಿ ಆಗಬೇಕಿದೆ. ಎಲ್ಲಾ ಡ್ಯಾಂ ನಲ್ಲೂ ಸಣ್ಣ ಪುಟ್ಟ ಲೋಪ ಇವೆ. ಮುಂಜಾಗ್ರತಾ ಕ್ರಮ ಏನೇನು ಆಗಬೇಕೋ ಅದನ್ನು ನಮ್ಮ ಸರ್ಕಾರ ತೆಗೆದುಕೊಳ್ಳುತ್ತದೆ ಎಂದರು.

* *ಭಾಗ್ಯಲಕ್ಷ್ಮೀ ಬಾಂಡ್ ಸ್ಥಗಿತಗೊಂಡಿಲ್ಲ*
ಭಾಗ್ಯಲಕ್ಷ್ಮಿ ಬಾಂಡ್ ಸ್ಥಗಿತಗೊಳಿಸಿಲ್ಲ. ಇದನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ನಿರಂತರವಾಗಿ ನಡೆಯಲಿದೆ. ಮಗುವಿಗೆ 21 ವರ್ಷ ಮುಗಿದ ಬಳಿಕ ಬಾಂಡ್ ಮೊತ್ತ ಫಲಾನುಭವಿಗಳಿಗೆ ಸೇರುತ್ತದೆ ಎಂದು ಸಚಿವರು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.