LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶೀಘ್ರ 8 ಕೆರೆಗಳಿಗೆ ಭದ್ರಾ ನೀರು.! ಡಿಸಿಎಂ ಡಿ.ಕೆ.ಶಿವಕುಮಾರ್‌ ಭರವಸೆ : ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

 

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ತಾಲ್ಲೂಕಿನಲ್ಲಿ ಹೆಚ್ಚುವರಿಯಾಗಿ 8 ಕೆರೆಗಳಿಗೆ ನೀರು ತುಂಬಿಸಲು ಆದೇಶ ನೀಡಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಮಾಡಿದ್ದಾರೆ.

ವಿಧಾನಸೌಧದಲ್ಲಿ ಈಚೆಗೆ ನಡೆದ ವಿಶ್ವೇಶ್ವರಯ್ಯ ಜಲ ನಿಗಮದ ಸಭೆಯಲ್ಲಿ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ‘ಸರ್ಕಾರದ ಯಾವುದೇ ಯೋಜನೆ ಬಂದರು ಚಿತ್ರದುರ್ಗದ ಹೆಸರು ಕೇಳಿ ಬರುತ್ತಿದೆ. ಆದರೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಹೆಚ್ಚಿನ ಪ್ರಯೋಜ ಆಗುತ್ತಿಲ್ಲ. ಇದೀಗ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ವಿಚಾರದಲ್ಲಿ ಕ್ಷೇತ್ರಕ್ಕೆ ಅನ್ಯಾಯವಾಗಿದೆ. ಇದನ್ನು ಮೊದಲು ಸರಿಪಡಿಸಬೇಕು ಎಂದರು.

ಈ ಹಿಂದೆ ಕ್ಷೇತ್ರ ವ್ಯಾಪ್ತಿಯ 5 ಕೆರೆಗಳಿಗೆ ನೀರು ತುಂಬಿಸಲು ಆದೇಶವಾಗಿದೆ. ಆದರೆ ಉಳಿದ 8 ಕೆರೆಗಳಿಗೆ ನೀರು ತುಂಬಿಸದಿದ್ದರೆ ಜನರು ಸಮಸ್ಯೆಗೆ ಸಿಲುಕುತ್ತಾರೆ. ಕೂಡಲೇ 8 ಕೆರೆಗಳಿಗೆ ನೀರು ತುಂಬಿಸಿಧರೆ ಈ ವ್ಯಾಪ್ತಿ ಯಲ್ಲಿ ಬರುವ ಸಾವಿರಾರು ರೈತರಿಗೆ ಅನ್ನ ನೀಡಿದಂತಾಗುವುದು ಆದಕಾರಣ 8 ಕೆರೆಗಳಿಗೆ ನೀರು ತುಂಬಿಸುವಂತೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ಶಾಸಕರ ಮಾತು ಆಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ‘ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ 8 ಕೆರೆಗಳಿಗೆ ನೀರು ತುಂಬಿಸಲು ಡಿಪಿಆರ್‌ ಸಿದ್ಧಗೊಳಿಸುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿ,  ಶೀಘ್ರ ನೀರು ತುಂಬಿಸಲು ಆದೇಶ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ಪದ್ಧತಿ ಇಲ್ಲ.! ಬೋಸರಾಜು.!ಫೆ. 13 ರಿಂದ 15ರವರೆಗೆ ಸಂತ ಸೇವಾಲಾಲರ 286ನೇ ಜಾತ್ರಾ ಮಹೋತ್ಸವ.!ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 19ನೇ ಕಂತು ಹಣ ಬಿಡುಗಡೆ ಯಾವಾಗ?ಮಹಾ ಕುಂಭಮೇಳ ಹಿನ್ನೆಲೆ ಬಿಹಾರದಲ್ಲಿ 45 ಕಿ.ಮೀ.ವರೆಗೆ ಸಂಚಾರ ದಟ್ಟಣೆರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲುಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟSSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆ