ಭಾರತೀಯ ಸಾಂಪ್ರದಾಯಕವಲ್ಲದ ಉಡುಗೆಯನ್ನು ತೊಟ್ಟು ಬಂದವರಿಗೆ ಶ್ರೀ ಶಾರದಾಂಬೆ ದೇವಸ್ಥಾನದ ಅರ್ಧ ಮಂಟಪದ ಒಳಗೆ ಪ್ರವೇಶವಿರುವುದಿಲ್ಲ. ಅಂತವರು ಹೊರಗಿನ ಪ್ರಕಾರದಿಂದಲೇ ದೇವರ ದರ್ಶನವನ್ನು ಪಡೆಯಬೇಕಾಗುತ್ತದೆ.
ಶೃಂಗೇರಿ ಮಠದ ಈ ಆದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಕ್ತರು ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಅರ್ಧಂಬರ್ಧ ಬಟ್ಟೆ ತೊಟ್ಟು ಕೆಲವು ಬುದ್ಧಿಹೀನರು ಪಿಕ್ನಿಕ್ ಸ್ಪಾಟ್ ನಂತೆ ದೇವಾಲಯಗಳನ್ನು ಪ್ರವೇಶಿಸುತ್ತಾರೆ. ಇಂತಹ ನಿಯಮಗಳಿಂದ ಅದಕ್ಕೆ ಕಡಿವಾಣ ಹಾಕಬಹುದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪುರುಷರಾದಲ್ಲಿ ಧೋತಿ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್ – ದುಪಟ್ಟ ಅಥವಾ ಲಂಗ ದಾವಣಿಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವರ ದರ್ಶನ ಮಾಡಬಹುದು.