LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ.22-29ರವರೆಗೆ 26ನೇ ವರ್ಷದ ಭಜನಾ ಕಮ್ಮಟ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ಭಜನಾ ಕಮ್ಮಟವು ಸೆಪ್ಟೆಂಬರ್ 22ರಿಂದ ಸೆಪ್ಟೆಂಬರ್ 29ರವರೆಗೆ ನಡೆಯಲಿದೆ. ಕೊನೆಯ ದಿನ ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ. ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಹತೆಗಳು ಈ ಕೆಳಗಿನಂತಿವೆ.

* 18 ವರ್ಷದಿಂದ 45 ವರ್ಷದ ಒಳಗಿನವರಾಗಿರಬೇಕು.

* ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವುಳ್ಳವರಾಗಿರಬೇಕು.

* ಇದುವರೆಗಿನ ಯಾವುದೇ ಭಜನಾ ಕಮ್ಮಟದಲ್ಲಿ ಭಾಗವಹಿಸದೇ ಇರುವವರಾಗಿರಬೇಕು.

* ಒಂದು ಭಜನಾ ಮಂಡಳಿಯಿಂದ 2 ಜನ ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶ.

* ತಾವು ಕಲಿತು, ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು.

ಆಸಕ್ತರು ಸೆಪ್ಟೆಂಬರ್ 10ರ ಮೊದಲು ಸಂಬಂಧಪಟ್ಟ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಭಜನಾ ಕಮ್ಮಟದ ಸಂಚಾಲಕ ಟಿ. ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಭಜನಾ ಕಮ್ಮಟದ ಕಾರ್ಯದರ್ಶಿ ವೀರು ಶೆಟ್ಟಿಯವರು ತಿಳಿಸಿದ್ದಾರೆ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 9632064164, 8130132835, 9663464648
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯ