LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಳು ಎನ್ನಲಾದ ಸಂತ್ರಸ್ತೆ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭವಾನಿ ರೇವಣ್ಣ ಅವರ ಸಂಬಂಧಿಯೊಬ್ಬರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ನಾಪತ್ತೆಯಾದ ಸಂತ್ರಸ್ತೆಯ ಪುತ್ರ ಶುಕ್ರವಾರದಂದು ಕೆಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಹೆಚ್ ಡಿ ರೇವಣ್ಣ ವಿರುದ್ಧ ಸೆಕ್ಷನ್ 364/ಎ 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದೂ ನಮೂದಿಸಲಾಗಿದ್ದು, ಸಂತ್ರಸ್ತೆಯ ಪತ್ತೆಗೆ ವಿಶೇಷ ತನಿಖಾ ದಳ (ಎಸ್ ಐಟಿ) ಶುಕ್ರವಾರ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.

ಎಸ್ಐಟಿ ತಂಡಗಳು ಗುರುವಾರ ತಡರಾತ್ರಿಯಿಂದಲೇ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಶೋಧ ನಡೆಸಿದ್ದವು. ಇನ್ನು ಪ್ರಕರಣ ಸಂಬಂಧ ಭವಾನಿ ರೇವಣ್ಣ ಅವರಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಸಮರ್ಥ ಗೃಹ ಸಚಿವರನ್ನು ವಜಾ ಮಾಡಿ ಎಂದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ಹಲ್ಲೆ ಕೇಸ್: ನಟ ಧ್ರುವ ಸರ್ಜಾ ಮ್ಯಾನೇಜರ್ ಬಂಧನರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ'ಗ್ಯಾರೆಂಟಿಗಳಿಗೆ ಹಣವಿಲ್ಲದೆ 60 ಲಕ್ಷ ರೇಷನ್ ಕಾರ್ಡ್ ರದ್ದುಪಡಿಸಲು ಹೊರಟ ಕಾಂಗ್ರೆಸ್'- ಅಶೋಕ್ರಂಬುಟಾನ್‌ ಹಣ್ಣು ಗಂಟಲಿಗೆ ಸಿಲುಕಿ ಬಾಲಕಿ ಮೃತ್ಯುಕೊನೆಗೂ ಗೃಹಲಕ್ಷ್ಮಿಯರ ಖಾತೆಗೆ ಬಂತು ಹಣಕರ್ನಾಟಕದಲ್ಲಿ ಹಿಂದಿ ಹೇರಿಕೆ ಸಮರ್ಥನೀಯವ.?ಮಂಗಳೂರು: ಅಪಘಾತದ ವೇಳೆ ನೆರವಾದ ಬಾಲಕಿಯ ಸಮಯಪ್ರಜ್ಞೆಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ಆರೋಪಿ ನಾಗೇಂದ್ರ ವಿರುದ್ಧ ಚಾಜ್‌ಶೀಟ್‌ ಸಲ್ಲಿಕೆ'ರಾಜಕೀಯದಲ್ಲಿ ಯಾರೂ ಕೂಡ ನಿವೃತ್ತಿಯಾಗಬಾರದು'- ಮಲ್ಲಿಕಾರ್ಜುನ ಖರ್ಗೆ