ಸಂಸದ ಕೋಟಾ ಶ್ರೀನಿವಾಸ್ ಪೂಜಾರಿಗೆ ಮತ್ತೊಂದು ಜವಾಬ್ದಾರಿ ನೀಡಿದ ಹೈಕಮಾಂಡ್
ನವದೆಹಲಿ: ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಬಿಜೆಪಿ ಹೈಕಮಾಂಡ್ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಿದೆ. ಹೌದು. ಲೋಕಸಭೆಯ ಮುಖ್ಯ ಮತ್ತು ಸಚೇತಕರನ್ನು ನೇಮಕ ಮಾಡಿ ಬಿಜೆಪಿ ಘೋಷಿಸಿದೆ. ಓರ್ವರನ್ನು ಮುಖ್ಯ ಸಚೇತಕ ಹಾಗೂ 16 ಜನರನ್ನು ಸಚೇತಕರನ್ನಾಗಿ ನೇಮಕ ಮಾಡಿ ಬಿಜೆಪಿ ಸಂಸದೀಯ ಮಂಡಳಿಯ ಕಾರ್ಯದರ್ಶಿ ಶಿವಶಕ್ತಿನಾಥ್ ಭಕ್ಷಿ ಆದೇಶ ಹೊರಡಿಸಿದ್ದಾರೆ. ಡಾ ಸಂಜಯ್ ಜೈಸ್ವಾಲ್ ಅವರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ. 16 ಜನರ ಸಚೇತಕರ ಪೈಕಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಕೋಟ ಶ್ರೀನಿವಾಸ್ ಪೂಜಾರಿ ಅವರು ರಾಷ್ಟ್ರ ರಾಜಕಾರಣದಲ್ಲಿ ಮತ್ತೊಂದು ಹಂತದ ಮೇಲಕ್ಕೆ ಹೋಗಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೋಟ ಶ್ರೀನಿವಾಸ್ ಪೂಜಾರಿ ಅವರು, 'ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಯು ನನ್ನನ್ನು ಲೋಕಸಭಾ ಸಚೇತಕ ಹುದ್ದೆಗೆ ಪರಿಗಣಿಸಿ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದ ಸಲ್ಲಿಸುತ್ತೇನೆ' ಎಂದು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.