LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್ ದಾಖಲು

ಹಾವೇರಿ :ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ವಕ್ಫ್ ನೋಟಿಸ್ ಬಂದಿದ್ದೇ ಆತ್ಮಹತ್ಯೆಗೆ ಕಾರಣ ಎಂಬುವುದಾಗಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ‘ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ದುರಂತಗಳು ಸಂಭವಿಸುತ್ತಿವೆ. ಪ್ರತಿ ದಿನ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ಉಲ್ಲೇಖಿಸಿದ್ದರು. ಇದೀಗ ಈ ಟ್ವೀಟ್​ ಅನ್ನು ಅಳಿಸಿ ಹಾಕಲಾಗಿದೆ. ಈ ಕಾರಣದಿಂದ ಇದು ಸುಳ್ಳು ಮಾಹಿತಿ ಎಂದು ದೂರು ದಾಖಲಿಸಲಾಗಿದೆ.

ಮೃತನ ಬಗ್ಗೆ ಪಿಎಸ್‌ಐ ಆಡೂರ ಅವರು ತನಿಖೆ ಕೈಗೊಂಡು, ನಂತರ ಮೃತ ರೈತ ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎಂದು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ತಹಶೀಲ್ದಾರ ಹಾನಗಲ್ ರವರಿಗೆ ಸಲ್ಲಿಸಿರುತ್ತಾರೆ. ಮೃತನ ಕುಟುಂಬಕ್ಕೆ ಸರ್ಕಾರದಿಂದ 05 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ ಎಂಬುವುದಾಗಿ ಹಾವೇರಿ ಪೊಲೀಸರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದರು. ಆದುದರಿಂದ ವಕ್ಫ್ ನೋಟಿಸ್ ಬಂದಿದ್ದೇ ರೈತನ ಆತ್ಮಹತ್ಯೆಗೆ ಕಾರಣ ಎಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ದ ಎಫ್‌ಐಆರ್‍ ದಾಖಲಿಸಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರುದ್ರ ಭೂಮಿ ಸಂರಕ್ಷಣೆ: ಜನ ಪ್ರತಿನಿಧಿಯ ಮೊದಲ ಕೆಲಸ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ.!ಒಳಮೀಸಲಾತಿ:  ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ನಮ್ಮ ಬೆಂಬಲವಿಲ್ಲ.!ನಾಗಮೋಹನದಾಸರವರ ಜನಗಣತಿ ಲೋಪ ಸರಿಪಡಿಸಿ: ಶ್ರೀ ಇಮ್ಮಡಿಸಿದ್ಧರಾಮೇಶ್ವರ ಸ್ವಾಮೀಜಿ.!ನಟ ದರ್ಶನ್- ಪವಿತ್ರಾ ಗೌಡ ಸೇರಿ 7 ಜನ ಆರೋಪಿಗಳಿಗೆ ಜೈಲು.!ಶಾಲಾ ಶಿಕ್ಷಕರಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಪದೋನ್ನತಿ.!ಇಂದಿನಿಂದ ಭಾರೀ ಮಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!ಜರ್ಮನಿಯಲ್ಲಿ ಕೈತುಂಬ ಸಂಬಳ ನೀಡುವ ಎಂಎನ್‌ಸಿ ಕಂಪನಿ ಬಿಟ್ಟು . ಐಪಿಎಸ್‌ ಅಧಿಕಾರಿ ಆದ ಕತೆ.!ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್​ಐಆರ್ .!ಗ್ರಾಮ ಪಂಚಾಯಿತಿ ನೌಕರರಿಗೆ ಗುಡ್ ನ್ಯೂಸ್.!ಭೂ ಪರಿವರ್ತನೆಯಿಂದ ವಿನಾಯಿತಿ ಎಷ್ಟು ಎಕೆರೆಗೆ ಇಲ್ಲಿದೆ ಮಾಹಿತಿ.!