E-PAPER
17 Nov 2026, 12:24:28 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಗೃಹಲಕ್ಷ್ಮಿ ಸಂಘದ ಪ್ರಮಾಣ ಪತ್ರ ಹಸ್ತಾಂತರ

ಬೆಂಗಳೂರು (ವಿಧಾನಸೌಧ)-12:* ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು.

ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಲಕ್ಷ್ಮೀಪತಯ್ಯ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.

* *ಸಚಿವರ ಕನಸಿನ ಯೋಜನೆ*
ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರಿಗಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಿದ್ದಾರೆ.
ನವೆಂಬರ್‌ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ.

ಮಹಿಳೆಯರ ಸುರಕ್ಷತೆಗಾಗಿ ಅಕ್ಕಾಪಡೆಯನ್ನು ಸಜ್ಜುಗೊಳಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಮನೆಯ ಯಜಮಾನಿಯರ ಸಬಲೀಕರಣಕ್ಕಾಗಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಗೆ ಮತ್ತೊಂದು ಸ್ವರೂಪ ತಂದಿದ್ದಾರೆ.
ಸುಮಾರು 1 ಕೋಟಿ 24 ಲಕ್ಷದ 12 ಸಾವಿರ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದು, ಇದುವರೆಗೂ 52,416 ಕೋಟಿಗೂ ಅಧಿಕ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತ್ತೊಂದು ರೀತಿಯಲ್ಲಿ ತೊಡಗಿಸಿ ಆದಾಯ ಒದಗಿಸುವ ಸಲುವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಕನಸಿನ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ.

ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಇದರಿಂದ ಮಹಿಳೆಯರಿಗೆ ಮತ್ತಷ್ಟು ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ. ಮಹಿಳೆಯರ ಸುರಕ್ಷತೆ ಹಾಗೂ ಆರ್ಥಿಕವಾಗಿ ಸ್ವಾವಲಂಬನೆ ಮಾಡುವುದೇ ನನ್ನ ಹಾಗೂ ನಮ್ಮ ಸರ್ಕಾರದ ಮುಖ್ಯ ಗುರಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.‌

ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಲಕ್ಷ್ಮೀಪತಯ್ಯ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ‌ ಮಹೇಶ್ ಬಾಬು, ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ನಟರಾಜ್, ಎಂ.ಜಿ.ಪಾಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

====
"ಖಾಸಗಿ ಫೈನಾನ್ಸ್‌, ನ್ಯಾಷನಲ್‌ ಬ್ಯಾಂಕ್‌ಗಳಲ್ಲಿ ದುಬಾರಿ ಬಡ್ಡಿಗೆ ಸಾಲ ಪಡೆದು ಮಹಿಳೆಯರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಗೃಹಲಕ್ಷ್ಮೀ ಹಣದಿಂದಲೇ ಬ್ಯಾಂಕ್‌ ಆರಂಭಿಸಿ ಮಹಿಳೆಯರಿಗೆ ಸಂಕಷ್ಟದಲ್ಲಿ ಸಾಲದ ಸೌಲಭ್ಯ ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದೇ ನಮ್ಮ ಗುರಿʼ

-ಸಚಿವೆ ಲಕ್ಷ್ಮೀ ಹೆಬ್ಬಾಳಕರ್.‌

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.