ಬೆಂಗಳೂರು : ರಾಜ್ಯದಲ್ಲಿ ಸ್ಪ್ರಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋರ್ಟ್ ಮೊರೆ ಹೋಗಿದ್ದು ಅಲ್ಲದೆ ಈ ವಿಚಾರವಾಗಿ ತಡೆಯಾಜ್ಞೆ ಕೂಡ ತಂದಿದ್ದಾರೆ. ಇದೀಗ ಸಿದ್ದರಾಮಯ್ಯ ಅವರ ಚಾರಿತ್ರ್ಯ ಹರಣ ಮಾಡುವ ಸಂಚು ನಡೆದಿದೆ ಎಂದು ಬೆಂಗಳೂರಲ್ಲಿ ಗೃಹ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದರು.
ಈಗಾಗಲೇ ಈ ವಿಚಾರಕ್ಕೆ ಸಂಬಂಧಪಟ್ಟ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ ಬೇರೆ ಯಾರು ಈ ವಿಚಾರವಾಗಿ ಮಾತನಾಡುವ ಅವಶ್ಯಕತೆ ಇಲ್ಲ ಏನೇ ಇದ್ದರೂ ಕೂಡ ಕಾನೂನಿನ ಪ್ರಕಾರ ತನಿಖೆ ಮಾಡಿ ಬಯಲಿಗೆ ತರುವುದಕ್ಕೆ ಹೇಳಿದ್ದಾರೆ. ನಾವು ಅದನ್ನು ಮಾಡಿ ಇದನ್ನು ಬಯಲಿಗೆ ತರುತ್ತೇವೆ. ನನ್ನ ಪ್ರಕಾರ ಇದರ ಬಗ್ಗೆ ಅವರಿಗೆ ಹೆಚ್ಚು ಮಾಹಿತಿ ಇದೆ. ಸಮಯ ಸಂದರ್ಭ ಬಂದಾಗ ಅದನ್ನು ತಿಳಿಸುತ್ತೇನೆ ಎಂದು ಅವರು ತಿಳಿಸಿದರು.