LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಪೋಟ ಹಣ್ಣಿನ ಆರೋಗ್ಯ ಪ್ರಯೋಜನ..!

ಜ್ಯೂಸ್ ಕುಡಿಯಲು ಹೋದರೆ ಹೆಚ್ಚಾಗಿ ಜನರು ಇಷ್ಟಪಡುವಂತಹ ಜ್ಯೂಸ್ ಎಂದರೆ ಅದು ಚಿಕ್ಕು ಅಥವಾ ಸಪೋಟ ಜ್ಯೂಸ್ ಎಂದು ಹೇಳಬಹುದು. ಯಾಕೆಂದರೆ ಈ ಹಣ್ಣು ತುಂಬಾ ರುಚಿಕರ ಹಾಗೂ ಸಿಹಿ ಹೊಂದಿರುವುದು. ಇದರಿಂದಾಗಿ ಹೆಚ್ಚಿನವರಿಗೆ ಇದು ಇಷ್ಟವಾಗುತ್ತದೆ. ಸಪೋಟ ಹಣ್ಣು ತ್ವಚೆಯ ಆರೋಗ್ಯ ಮತ್ತು ಸೌಂದರ್ಯ ವೃದ್ಧಿಗೆ ಸಹಕಾರಿ. ಇದರಲ್ಲಿರುವ ವಿಟಮಿನ್‌ಗಳು ಚರ್ಮವನ್ನು ಹೈಡ್ರೇಟ್ ಆಗಿಡುತ್ತದೆ.

ಸಪೋಟ ಹಣ್ಣಿಗೆ ಚಿಕ್ಕು ಎಂತಲೂ ಕರೆಯುತ್ತಾರೆ. ಚಿಕ್ಕು ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಚಿಕ್ಕು ಹಣ್ಣಿನಲ್ಲಿರುವ ಕೆಲವು ಖನಿಜಾಂಶಗಳು, ಕ್ಯಾಲ್ಸಿಯಂ, ತಾಮ್ರ ಹಾಗೂ ಕಬ್ಬಿಣಾಂಶವು ಮೂಳೆಗಳನ್ನು ಬಲಪಡಿಸುತ್ತದೆ. ನಿಯಮಿತವಾಗಿ ಚಿಕ್ಕು ಹಣ್ಣು ಸೇವಿಸಿದರೆ ಮೂಳೆಗಳ ಆರೋಗ್ಯವು ವೃದ್ಧಿಯಾಗುತ್ತದೆ. ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ ಹಾಗೂ ನೋವು ಮತ್ತು ಊತ ಚಿಕಿತ್ಸೆಗೆ ಇದು ಪರಿಣಾಮಕಾರಿ.

ಸಪೋಟ ಹಣ್ಣಿನಲ್ಲಿ ವಿಟಮಿನ್ C, A ಮತ್ತು ಕಬ್ಬಿನಾಂಶ, ಪೊಟಾಶಿಯಂ ಮತ್ತು ತಾಮ್ರವಿದೆ. ಆಂಟಿಆಕ್ಸಿಡೆಂಟ್, ಉರಿಯೂತ ಶಮನಕಾರಿ, ವೈರಲ್ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ನಂಜುನಿರೋಧಕ ಗುಣಗಳು ಕೂಡ ಇದರಲ್ಲಿವೆ.ಚಿಕ್ಕು ಹಣ್ಣು ಗ್ಯಾಸ್ಟ್ರಿಕ್ ಹಾಗೂ ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುವುದು.ಇದರಲ್ಲಿ ನಾರಿನಾಂಶ ಅಧಿಕವಾಗಿದ್ದು, ಜೀರ್ಣಕ್ರಿಯೆಗೆ ಸಹಕಾರಿದೆ. ಇದು ಮಲಬದ್ಧತೆ ಇರುವವರಿಗೆ ತುಂಬಾ ಒಳ್ಳೆಯದು.

ಸಪೋಟ ಹಣ್ಣಿನಲ್ಲಿರುವ ಕ್ಯಾಲ್ಸಿಯಂ, ಪೋಸ್ಪರಸ್, ತಾಮ್ರ ಮತ್ತು ಕಬ್ಬಿನಾಂಶವು ಮೂಳೆಯನ್ನು ಬಲಗೊಳಿಸುವಲ್ಲಿ ಸಹಕಾರಿಯಾಗಿವೆ. ಚಿಕ್ಕು ಹಣ್ಣಿನಲ್ಲಿರುವ ಆಂಟಿಆಕ್ಸಿಡೆಂಟ್‍ಗಳು ಪ್ರತಿರೋಧಕ ಶಕ್ತಿಯನ್ನು ಬಲಿಷ್ಠವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸಪೋಟ ಹಣ್ಣು ದೇಹದ ಶಕ್ತಿಯನ್ನು ವೃದ್ಧಿಸುತ್ತದೆ. ಚರ್ಮದ ಆರೋಗ್ಯ ವೃದ್ಧಿಸುವುದು ಮತ್ತು ದೀರ್ಘಕಾಲಿಕ ಕಾಯಿಲೆಗಳ ಅಪಾಯ ತಗ್ಗಿಸುವುದು. ಇದು ವೈರಸ್, ಬ್ಯಾಕ್ಟೀರಿಯಾಗಳಿಂದ ರಕ್ಷಣೆ ನೀಡುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ