E-PAPER
17 Nov 2026, 12:18:32 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಫಾಯಿ ಕರ್ಮಚಾರಿ ಸಂಘಟನೆಯ ಪ್ರತಿಭಟನೆ

ಬೆಳಗಾವಿ-05: ಬೆಳಗಾವಿಯ ಪೌರ ಕಾರ್ಮಿಕರ ಹಲವು ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಸಮಸ್ಯೆಗಳನ್ನು ಆಗಸ್ಟ್ 15ರೊಳಗೆ ಪರಿಹರಿಸದಿದ್ದಲ್ಲಿ, 79ನೇ ಸ್ವಾತಂತ್ರ್ಯ ದಿನದಂದು ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಮೈಮೇಲೆ ಮಲ ಸುರಿಸಿಕೊಂಡು ಪ್ರತಿಭಟನೆ ನಡೆಸುವುದಾಗಿ ಪೌರ ಕಾರ್ಮಿಕರ ಸಂಘ ಎಚ್ಚರಿಕೆ ನೀಡಿದೆ.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಫಾಯಿ ಕರ್ಮಚಾರಿ ಸಂಘಟನೆಯ ನೇತ್ರದಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಜಮಾವನೆಗೊಂಡು ತಮ್ಮ ವಿವಿಧ ಬೇಡಿಕೆಗಳನ್ನು ಶೀಘ್ರದಲ್ಲಿ ಇದೇರಿದಬೇಕೆಂದು ಪ್ರತಿಭಟನೆಯಲ್ಲಿ ಜಿಲ್ಲಕಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಪೌರ ಕಾರ್ಮಿಕರ ವಿವಿಧ ಬೇಡಿಕೆಗಳ ಬಗ್ಗೆ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಸಂಬಂಧಿತ ಇಲಾಖೆಗಳ ಗಮನವನ್ನು ಹಲವು ಬಾರಿ ಸೆಳೆದಿದ್ದರೂ ಪೌರ ಕಾರ್ಮಿಕರ ಪ್ರಮುಖ ಬೇಡಿಕೆಗಳು ಇನ್ನೂ ಈಡೇರಿಲ್ಲ ಎಂದು ಪ್ರತಿಭಟನೆಯಲ್ಲಿ ಆಕ್ರೋಶ್ ಹೋರ ಹಾಕಿದರು.
ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಗಳಲ್ಲಿ ಜಿಲ್ಲಾಧಿಕಾರಿಗಳು ಸಂಬಂಧಿತ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದ್ದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ, ಅಲ್ಲದೆ ಸಂಬಂಧಿತ ಸಚಿವರು ಹಾಗೂ ಸಫಾಯಿ ಕರ್ಮಚಾರಿ ಆಯೋಗಕ್ಕೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.
ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ 2025ರ ಡಿಸೆಂಬರ್ 15ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಮುಷ್ಕರ ನಡೆಸಲಾಗಿತ್ತು. ಆದರೂ ಬೇಡಿಕೆಗಳ ಬಗ್ಗೆ ಯಾವುದೇ ತೃಪ್ತಿಕರ ಕ್ರಮ ಕೈಗೊಳ್ಳದಿರುವುದರಿಂದ ಮತ್ತೆ ಪ್ರತಿಭಟನೆಗೆ ಮುಂದಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಂಘ ತಿಳಿಸಿದೆ.
ರಾಜೀವ್ ಗಾಂಧಿ ವಸತಿ ನಿಗಮದಿಂದ ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾದ ಪತ್ರ ಹಾಗೂ ಸಂಘ ಸಲ್ಲಿಸಿದ ಮನವಿಯಂತೆ ದೇವರಾಜ ಅರಸು ವಸತಿ ಯೋಜನೆಯಡಿ ಗುರುತಿಸಲಾದ 396 ಪೌರ ಕಾರ್ಮಿಕ ಕುಟುಂಬಗಳ ಅವಲಂಬಿತರಿಗೆ ಮನೆಗಳನ್ನು ಒದಗಿಸುವುದು ಸೇರಿದಂತೆ ಒಟ್ಟು ಐದು ಪ್ರಮುಖ ಬೇಡಿಕೆಗಳನ್ನು ಆಗಸ್ಟ್ 15ರೊಳಗೆ ಈಡೇರಿಸಬೇಕೆಂದು ಸಂಘ ಒತ್ತಾಯಿಸಿದೆ.
ನಿಗದಿತ ಅವಧಿಯೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ, ಆಗಸ್ಟ್ 15ರಂದು ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಮೈಮೇಲೆ ಮಲ ಸುರಿಸಿಕೊಂಡು ಉಗ್ರವಾದ ಪ್ರತಿಭಟನೆ ಮಾಡುವುದಾಗಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ವೇಳೆ ಸಫಾಯಿ ಕರ್ಮಚಾರಿಗಳ ಸಂಘದ ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು , ಕಾರ್ಯದರ್ಶಿಗಳು, ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.