LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೆ - ಕಾನೂನಿನ ಕೈಗಳಿಗೆ ಇನ್ನಷ್ಟು ಬಲ -ಸಿಎಂ ಟ್ವಿಟ್‌

ಬೆಂಗಳೂರು: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಈ ಕುರಿತು ಟ್ವಿಟ್‌ ಮಾಡಿದ ಅವರು, ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ ಒಂದು ಸರ್ಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ.ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು. ಈ ಮೂಲಕ ವಿರೋಧ ಪಕ್ಷಗಳ ಆರೋಪಕ್ಕೆ ಪರೋಕ್ಷವಾಗಿ ಉತ್ತರಿಸಿದ್ದಾರೆ.

ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ. ಅಲ್ಲದೇ ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ. ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೂಡ ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ. ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂ.ಡಿ ಹಾಗೂ ಸಿ.ಇ.ಒ ಹತ್ಯೆಯ ಆರೋಪಿಗಳನ್ನು ಕೂಡ ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ ಎಂದು ತಿಳಿಸಿದರು.

ಈ ಎಲ್ಲಾ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭಯೋಗಿ ಆದಿತ್ಯನಾಥ್ ಭಯ - ಪೊಲೀಸರಿಗೆ ಶರಣಾದ 74 ರೌಡಿಶೀಟರ್‌ಗಳುಊಟದ ಮಧ್ಯೆ ನೀರು ಕುಡಿಯುತ್ತೀರಾ?ಕುಡಿದರೂ ಲಾಭವಿದೆಯಾ..!ಸಿಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ.! ಸಂಸದ ಪ್ರತಾಪ್ ಸಿಂಹ ಮೇಲೆ ಎಫ್ಐಆರ್.!ಈ ಪ್ರಕರಣಕ್ಕೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ  ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲು.!ರೈತರಿಗೆ “ಲಾಭದಾಯಕ ಹೈನುಗಾರಿಕೆ ತರಬೇತಿ : ನೊಂದಣಿಗೆ ಸೂಚನೆ