LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ





ಬಳ್ಳಾರಿ,ನ.10

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ಕಾರ್ಯಕ್ರಮಗಳಡಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿಯ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ www.sw.kar.nic.in ಅಥವಾ https://ssp.postmatric.karnataka.gov.in/homepage.aspx ಲಿಂಕ್ ನಲ್ಲಿ ಅರ್ಜಿ ಸಲ್ಲಿಸಬಹುದು.

*ಸೂಚನೆಗಳು*:

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡಿ ಪ್ರಥಮ ಬಾರಿಗೆ, ಪ್ರಥಮ ಪ್ರಯತ್ನದಲ್ಲಿ ಪಾಸಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿ ವಿದ್ಯಾಥಿವೇತನ ಪಡೆದ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿಗೆ ಅರ್ಜಿ ಸಲ್ಲಿಸಬಹುದು.

ಕಳೆದ ಸಾಲಿನಲ್ಲಿ ವಿವಿಧ ಕಾರಣಗಳಿಂದ ವಿದ್ಯಾರ್ಥಿ ವೇತನ ಮಂಜೂರಾಗದ ಹಾಗೂ ರಿಜೆಕ್ಟ್ ಆಗಿರುವ ವಿದ್ಯಾರ್ಥಿಗಳು ಮಾತ್ರ ಪ್ರಸಕ್ತ ಸಾಲಿನಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗಳಿಗೆ ಎನ್‌ಪಿಸಿಐ ಆಧಾರ್ ಸೀಡಿಂಗ್ ಮಾಡಿಸಿರಬೇಕು. ತೊಂದರೆಯಿದ್ದಲ್ಲಿ ಅಂಚೆ ಕಚೇರಿಯಲ್ಲಿ ಖಾತೆಯನ್ನು ತೆರೆಯಬೇಕು. ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಪ್ರತಿ ಶೈಕ್ಷಣಿಕ ಸಾಲಿಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.

ಪ್ರಸಕ್ತ ಸಾಲಿನಿಂದ ಪ್ರತಿ ಶಾಲಾ ಮುಖ್ಯೋಪಾಧ್ಯಾಯರು, ಹಾಗೂ ಕಾಲೇಜು ಪ್ರಾಂಶುಪಾಲರು ಗಳಿಗೆ ಸಬಲೀಕರಣ ಅಧಿಕಾರಿ ಅಥವಾ ಸಂಸ್ಥೆಯ ನೋಡಲ್ ಅಧಿಕಾರಿಯನ್ನು ನಿಯೋಜಿಸಿದ್ದು, ತಾಲ್ಲೂಕು ಲಾಗಿನ್‌ನಲ್ಲಿ ಸೇರ್ಪಡೆ ಮಾಡಿಕೊಳ್ಳಲು ಕ್ರಮವಹಿಸಬೇಕು. ನಂತರ ಸೇರ್ಪಡೆಯಾದ ಅಧಿಕಾರಿಗಳ ಇ-ಕೆವೈಸಿ ವಿವರಗಳನ್ನು ಅಪ್ಡೇಟ್ ಮಾಡಿ ಅನುಮೋದಿಸುತ್ತಾರೆ.

ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲು ಬಯೋಮೇಟ್ರಿಕ್ ಇ-ಧೃಢಿಕರಣ/ಎನ್‌ಎಸ್‌ಪಿ ಒಟಿಆರ್ ನೊಂದಣಿಯನ್ನು ಮಾಡಿಸಿದ ನಂತರ ಎಸ್‌ಎಸ್‌ಪಿ ಯಲ್ಲಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಮೊದಲನೇ ರೈಲ್ವೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ(ಗ್ರೇಡ್-1) ಕಚೇರಿ ಅಥವಾ ದೂ.08392-244738, ಮೊ.9480843073 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು