Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದ

ಕಠ್ಮಂಡು: ನೇಪಾಳ ಪ್ರವಾಹದ ವೇಳೆ ತ್ರಿಶೂಲಿ 3ಎ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಸಿಲುಕಿಕೊಂಡಿದ್ದ ವಿದ್ಯುತ್ ಪ್ರಾಧಿಕಾರದ ಇಬ್ಬರು ಸಿಬ್ಬಂದಿಯನ್ನು, ಘಟನೆ ನಡೆದ 9 ದಿನಗಳ ಬಳಿಕ ರಕ್ಷಿಸಲಾಗಿದೆ.

ಸುರಂಗದಲ್ಲಿ ಸಿಲುಕಿಕೊಂಡಿದ್ದ 30 ವರ್ಷದ ಸಂಜಯ್ ಶಾ ಅವರು ಕಾರ್ಯಾಚರಣೆಯ ನಂತರ ರಕ್ಷಣಾ ಸಿಬ್ಬಂದಿಯೊಂದಿಗೆ ಮಾತನಾಡಿದ್ದು, "ನಾನು ಘಟನೆ ನಡೆದ ಬಳಿಕ ಯಾರಾದರೂ ಬಂದು ನನ್ನನ್ನು ರಕ್ಷಿಸುತ್ತಾರೆ ಎನ್ನುವ ನಂಬಿಕೆಯಲ್ಲಿ 'ಹರೇ ಕೃಷ್ಣ' ಎಂದು ಸತತವಾಗಿ 9 ದಿನ ಪಠಿಸುತ್ತಿದ್ದೆ” ಎಂದು ಹೇಳಿದ್ದಾರೆ.

ಕಾಕತಾಳೀಯವಾಗಿ, ಸಂಜಯ್ ಶಾ ಅವರು ಕೃಷ್ಣ ಜನ್ಮಾಷ್ಟಮಿ ದಿನವೇ ಸುರಂಗದಿಂದ ಸುರಕ್ಷಿತವಾಗಿ ಹೊರಬಂದಿದ್ದಾರೆ.

'ಘಟನೆ ನಡೆಯುವ ವೇಳೆ ನಾನು ಕಂಟ್ರೋಲ್ ರೂಮ್‌ನಲ್ಲಿ ಕೆಲಸ ಮಾಡುತ್ತಿದೆ. ಎಲ್ಲರ ಜೀವವನ್ನು ಉಳಿಸುವುದು ನನ್ನ ಹೊಣೆಯಾಗಿತ್ತು, ಹಾಗಾಗಿ ನಾನು ಹಿಂದೆಯೇ ಉಳಿದುಕೊಳ್ಳಬೇಕಾಯಿತು. ಎಲ್ಲರಿಗೂ ಅಲ್ಲಿಂದ ಹೊರಹೋಗಲು ತಿಳಿಸುತ್ತಿದ್ದೆ, ಆದರೆ ನಾನು ಅಲ್ಲಿಂದ ತಪ್ಪಿಸಿಕೊಳ್ಳುವ ವೇಳೆಗೆ ತಡವಾಗಿತ್ತು' ಎಂದು ಹೇಳಿದ್ದಾರೆ.

'ಸಂಜಯ್ ಶಾ ಅವರನ್ನು ತ್ರಿಶೂಲಿಯಲ್ಲಿರುವ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಹಾಗೂ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲ' ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.

ಇದೇ ವೇಳೆ 45 ವರ್ಷದ ಕಬೀರ್ ಮಹರ್‌ಜನ್ ಅವರನ್ನು ಕೂಡ ಸುರಕ್ಷಿತವಾಗಿ ರಕ್ಷಿಸಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲ್ಮಂಡುವಿನಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜಲವಿದ್ಯುತ್‌ ಯೋಜನೆಯ ಸುರಂಗದಲ್ಲಿ ಇನ್ನೂ ಹಲವರು ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸುವ ಉದ್ದೇಶದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ