LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರ್ಕಾರಿ ನೌಕರರು ಬೇಡಿಕೆ ಈಡೇರಿಸಿ ಒತ್ತಾಯಿಸಿ  ಜುಲೈ 29 ರಿಂದ ʻಅನಿರ್ದಿಷ್ಟಾವಧಿ ಮುಷ್ಕರ.!

ಬೆಂಗಳೂರು : ಏಳನೇ ವೇತನ ಆಯೋಗದ ವರದಿ, ಹಳೆ ಪಿಂಚಣಿ ವ್ಯವಸ್ಥೆ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಆಗ್ರಹಿಸಿ ಜುಲೈ 29 ರಿಂದ ʻಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರು ನಿರ್ಧರಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯಕಾರಿಣಿ ಸಭೆ ಬಳಿಕ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.‌ ಷಡಕ್ಷರಿ,7ನೇ ವೇತನ ಆಯೋಗ ವರದಿ ನೀಡಿ 19 ತಿಂಗಳುಗಳೇ ಕಳೆದರೂ ರಾಜ್ಯ ಸರಕಾರ ಇನ್ನೂ ಜಾರಿಗೊಳಿಸಿಲ್ಲ. ನೌಕರರಿಗೆ ಹಳೆ ಪಿಂಚಣಿ ಯೋಜನೆ ಮುಂದುವರಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಸೇರಿದಂತೆ ಯಾವುದೇ ಬೇಡಿಕೆಗಳಿಗೂ ಸರ್ಕಾರ ಸ್ಪಂದಿಸಿಲ್ಲ ಹೀಗಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಎರಡು ಹಂತಗಳಲ್ಲಿ ಹೋರಾಟ ನಡೆಯಲಿದೆ. ಮೊದಲ ಹಂತವಾಗಿ ಜುಲೈ 8ರಿಂದ 14ರವರೆಗೆ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಮನವಿ ಸಲ್ಲಿಕೆ ಆಂದೋಲನ ನಡೆಯಲಿದೆ. ಮನವಿ ಸಲ್ಲಿಕೆ ನಂತರ ಜುಲೈ 23ರಂದು ಬೆಂಗಳೂರಿನಲ್ಲಿ ಮತ್ತೊಮ್ಮೆ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು. ಸ್ಪಂದಿಸದಿದ್ದಲ್ಲಿ ಎರಡನೇ ಹಂತದ ಹೋರಾಟವಾಗಿ ಜುಲೈ 29ರಿಂದ ಕರ್ತವ್ಯಗೈರಾಗಿ ಮುಷ್ಕರ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಂಕ್ ಫುಡ್ ತಿನ್ತೀರಾ.. ಹುಷಾರ್..! ತಿಂಡಿ ಪೊಟ್ಟಣದಲ್ಲಿ ಸತ್ತ ಹಾವಿನ ಮರಿ ಪತ್ತೆ..!!ಮುದ್ದಿನ ನಾಯಿಮರಿ ಹುಟ್ಟುಹಬ್ಬಕ್ಕೆ ಕೇಕ್ ಕಟ್ ಮಾಡಿ ಪಾರ್ಟಿ ಮಾಡಿದ ರಾಧಿಕಾ ಪಂಡಿತ್ ಫ್ಯಾಮಿಲಿ!ಬ್ಯಾಂಕುಗಳು ಕೆಲಸಕ್ಕೆ ಸ್ಥಳೀಯ ಭಾಷೆಯವರಿಗೆ ಆಧ್ಯತೆ: ನಿರ್ಮಲಾ ಸೀತಾರಾಮನ್.!ವಿವಿಧ ಯೋಜನೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! 07-11-2025.!ತಂದೆ ತಾಯಿ ಮಕ್ಕಳಿಗೆ ಈ ಮಂತ್ರಗಳನ್ನು ಕಲಿಸಿದರೆ ಅವರ ಆತ್ಮವಿಶ್ವಾಸ ಹೆಚ್ಚಾಗುತ್ತದೆಅಲ್ಲಮಪ್ರಭುದೇವರು ವಚನ.!ಸರಸ್ವತಿ ಕೆ.ಸಿ ವೀರೇಂದ್ರ  ಒಲಿದ ಗಿನ್ನಿಸ್ ರೆಕಾರ್ಡ್ .!ಮೊದಲ ಬಾರಿಗೆ ಕರ್ನಾಟಕ ರಾಜ್ಯ ಲಿಂಗ ಅಲ್ಪಸಂಖ್ಯಾತರ ಸಮೀಕ್ಷೆ ಪ್ರಾರಂಭಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ - 20 ಮಂದಿಗೆ ಗಂಭೀರ ಗಾಯ